ನಾನು ಸರ್ಕಾರದ ವಿರುದ್ಧ ಇದ್ದೇನೆ ಎಂಬುದು ಸುಳ್ಳು: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆ ವೀಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. 

Last Updated : Jun 29, 2018, 07:18 PM IST
ನಾನು ಸರ್ಕಾರದ ವಿರುದ್ಧ ಇದ್ದೇನೆ ಎಂಬುದು ಸುಳ್ಳು: ಸಿದ್ದರಾಮಯ್ಯ title=

ಬೆಂಗಳೂರು: ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರದ ಆಯುಷ್ಯದ ಕುರಿತು ಮಾತನಾಡಿದ್ದ ವೀಡಿಯೋ ಬಗ್ಗೆ ಮೌನ ಮುರಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆ ವೀಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. 

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಮುಗಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಮಾತನಾಡಿರುವ ವಿಚಾರವನ್ನು ರೆಕಾರ್ಡ್ ಮಾಡಿಕೊಂಡು ಮಾಧ್ಯಮದವರಿಗೆ ಬಿಡುಗಡೆ ಮಾಡಿದ್ದಾರೆ. ಅವರಿಗೆ ನೈತಿಕತೆ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. 

ಮುಂದುವರೆದು, "ನಾನು ಸರ್ಕಾರದ ವಿರುದ್ಧವಾಗಿ ಇಲ್ಲ. ಅದೆಲ್ಲಾ ಶುದ್ಧ ಸುಳ್ಳು. ನಾನು ಏನು ಹೇಳಿದ್ದೇನೆ, ಯಾವ ವಿಚಾರವಾಗಿ ಮಾತನಾಡಿದ್ದೇನೆ ಎನ್ನುವುದು ನಿಮಗೆ ಗೊತ್ತಿಲ್ಲ. ಯಾವುದೋ ಸಂದರ್ಭದಲ್ಲಿ ಮಾತನಾಡಿದ ಒಂದು ತುಣುಕನ್ನು ಪ್ರಸಾರಮಾಡಲಾಗಿದೆ ಎಂದು ಹೇಳಿದರು.

ಕಳೆದ 10 ದಿನಗಳಿಂದ ಮಂಗಳೂರು ಬಳಿಯ ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿಯಷ್ಟೇ ಬೆಂಗಳೂರಿಗೆ ಹಿಂದಿರುಗಿದ್ದು, ಇಂದು ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. 

Trending News