ನಾನು ಬೆಂಗಳೂರಿನಲ್ಲಿ ಇಲ್ಲ, ಸತ್ಯ ಆದಷ್ಟು ಬೇಗ ಹೊರಬರಲಿದೆ: ಪ್ರಜ್ವಲ್ ರೇವಣ್ಣ
Hassan PenDrive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಸಂಬಂಧ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಈ ಪ್ರಕರಣದ ತನಿಖೆಗೆ SIT ರಚಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.
Hassan PenDrive Case: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಭಾರೀ ಸುದ್ದಿಯಾಗಿದೆ. ಪ್ರತಿಪಕ್ಷಗಳು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿವೆ. ಇದೇ ವೇಳೆ ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಹೌದು, ತಮ್ಮ ವಿರುದ್ಧದ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು, ತಮ್ಮ ವಕೀಲರ ಮೂಲಕ ಸಿಐಡಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ʼವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆʼ ಎಂದು ಹೇಳಿದ್ದಾರೆ.
60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ - ಜೋಶಿ ಲೇವಡಿ
ಎಚ್.ಡಿ.ರೇವಣ್ಣ ಹೇಳಿದ್ದೇನು?
‘ಅಶ್ಲೀಲ ವಿಡಿಯೋ’ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ತಂದೆ ಎಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದು, ʼತನಿಖೆಗೆ ಹಾಜರಾಗುವಂತೆ ಎಸ್ಐಟಿ ನನಗೆ ನೋಟಿಸ್ ನೀಡಿದೆ. ನಾನು ಎಲ್ಲವನ್ನೂ ಧೈರ್ಯದಿಂದ ಎದುರಿಸಲು ಸಿದ್ಧನಿದ್ದೇನೆʼ ಅಂತಾ ಹೇಳಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?
ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಸಂಬಂಧ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಈ ಪ್ರಕರಣದ ತನಿಖೆಗೆ SIT ರಚಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.
ಇದನ್ನೂ ಓದಿ: Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್.ಡಿ.ರೇವಣ್ಣ!
ಪೋರ್ನ್ ವಿಡಿಯೋ ಕ್ಲಿಪ್ ವೈರಲ್!
ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣರಿಗೆ ಸಂಬಂಧಿಸಿವೆ ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಪ್ರಕರಣ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು SIT ರಚಿಸಿದೆ.
ಸೇವಕಿಯಿಂದ ಗಂಭೀರ ಆರೋಪ!
ಪ್ರಜ್ವಲ್ ಹಾಗೂ ಆತನ ತಂದೆ ರೇವಣ್ಣಗೆ SIT ಮಂಗಳವಾರ ನೋಟಿಸ್ ಜಾರಿ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಸೂಚಿಸಿದೆ. ಆತನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ದೂರಿನ ಮೇರೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅ.28ರಂದು ಲೈಂಗಿಕ ಕಿರುಕುಳ ಆರೋಪದ ಪ್ರಕರಣ ದಾಖಲಾಗಿತ್ತು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪರಮೇಶ್ವರ, 'ಯಾರನ್ನೂ ಏಕಾಏಕಿ ಬಂಧಿಸಿಲ್ಲ. ದೂರುಗಳು, ಸಾಕ್ಷ್ಯಗಳು, ವಿಧಿಸಲಾದ ಸೆಕ್ಷನ್‌ಗಳು ಮತ್ತು ಅವು ಜಾಮೀನು ಅಥವಾ ಜಾಮೀನು ರಹಿತವೇ ಎಂಬಿತ್ಯಾದಿ ಎಲ್ಲಾ ಅಂಶಗಳನ್ನು ಪರಿಗಣಿಸಲಾಗುವುದು. ಹೀಗಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41A ಅಡಿಯಲ್ಲಿ SIT ನೋಟಿಸ್ ಜಾರಿ ಮಾಡಿದೆ. ರೇವಣ್ಣ ಮತ್ತು ಪ್ರಜ್ವಲ್ 24 ಗಂಟೆಗಳ ಒಳಗೆ ಹಾಜರಾಗಬೇಕು ಮತ್ತು ಹಾಗೆ ಮಾಡದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.