ಮೈಸೂರು: ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ನಾನೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರಿನಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ನಾನೇ... ಹಾಗಾಗಿಯೇ ಸರಕಾರ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಿಲ್ಲ. ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲಿದೆ ಎಂದು ಸಿದ್ದರಾಮಯ್ಯ ಹೇಳಿದರು.


ಮುಂದುವರೆದು ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಬಗ್ಗೆ ರಾಜ್ಯದಲ್ಲಿ ಒಳ್ಳೆ ಅಭಿಪ್ರಾಯವಿದೆ. ರೈತರ ಸಾಲ ಮನ್ನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಹೀಗಿರುವಾಗ, ಸಮ್ಮಿಶ್ರ ಸರ್ಕಾರದ ಯಾವೊಬ್ಬ ಶಾಸಕರೂ ಸರ್ಕಾರ ಅಸ್ಥಿರಗೊಳಿಸಲು ಸಜ್ಜಾಗಿಲ್ಲ. ಅಗತ್ಯಬಿದ್ದರೆ ಮಾತ್ರ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಹಾಗೆಯೇ ಅಕ್ಟೋಬರ್ 3ರ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.