ಬೆಂಗಳೂರು : ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಭಾನುವಾರ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ಥನಾರಾಯಣ, ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನವಿದೆ. ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ಸಿನಿಮಾದ ಭಾಗವಾಗುತ್ತಿಲ್ಲ ಎಂದರು. 


ಇದನ್ನೂ ಓದಿ : ಕರ್ನಾಟಕದ ಇತಿಹಾಸದಲ್ಲಿ 25 ಸಿಎಂಗಳು ಬಂದರೂ ಸಹ, 5 ವರ್ಷ ಪೂರ್ಣಗೊಳಿಸಿದ್ದು ಮೂವರು ಮಾತ್ರ: ಯಾರವರು ಗೊತ್ತಾ?


ಹೆಚ್‌ಡಿಕೆಗೆ ಟಾಂಗ್ ಕೊಟ್ಟ ಅಶ್ವಥ್ ನಾರಾಯಾಣ್


ಉರಿಗೌಡ ನಂಜೇಗೌಡ ಇದ್ದದ್ದು ಸತ್ಯ. ಟಿಪ್ಪುವನ್ನು ಪಡೆದುಕೊಂಡಿದ್ದೇನು? ಟಿಪ್ಪುವನ್ನು ಎಂದೆಂದಿಗೂ ವಿರೋಧಿಸೋದೆ. ಸುವರ್ಣ ಮಂಡ್ಯ ಪುಸ್ತಕ ಯಾರು ಬರೆದಿದ್ದು?  ಆ ಪುಸ್ತಕದಲ್ಲಿ ಆ ಎರಡು ಹೆಸರು ಕಾಲ್ಪನಿಕಾನಾ? ವಿರೋಧ ಮಾಡುವವರು ಮಾಡ್ತಾರೆ. ಅಧ್ಯಯನ ಮಾಡಿ ಎಲ್ಲ ವಿಚಾರಗಳನ್ನು ಬರುವಂಥದ್ದು ಮಾಡಲಿ . ಟಿಪ್ಪು ಸುಲ್ತಾನ್ ಫೋಟೋಗಳನ್ನು ತೆಗೆದುಕೊಂಡು ಹೋಗಿ ಅವ್ರ ಮನೆಯಲ್ಲಿ, ಕಾರುಗಳ ಮೇಲೆ ಅಂಟಿಸಿಕೊಳ್ಳಲಿ ಎಂದು ಹೆಚ್‌.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. 


ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ; ಕಾಲಮಿತಿಯಲ್ಲಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.