ಜನಾರ್ಧನ ರೆಡ್ಡಿ ಪ್ರಕರಣಕ್ಕೂ, ನಂಗೂ ಸಂಬಂಧ ಇಲ್ಲ: ಬಿ.ಎಸ್.ಯಡಿಯೂರಪ್ಪ
ಜನಾರ್ಧನ ರೆಡ್ಡಿ ಈಗ ನಮ್ಮ ಪಕ್ಷದಲ್ಲಿಲ್ಲ, ನನಗೂ ಅವರಿಗೂ ಯಾವ ಸಂಬಂಧವೂ ಇಲ್ಲ. ಆಂಬಿಡೆಂಟ್ ಚಿಟ್ ಫಂಡ್ ಡೀಲ್ ಪ್ರಕರಣದ ಬಗ್ಗೆ ನನಗೇನೂ ತಿಳಿದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮಂಗಳೂರು: ಆಂಬಿಡೆಂಟ್ ಚಿಟ್ ಫಂಡ್ ಡೀಲ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಾರ್ಧನರೆಡ್ಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಜನಾರ್ಧನ ರೆಡ್ಡಿ ಮನೆ ಮೇಲೆ ಸಿಸಿಬಿ ಪೊಲೀಸ್ ದಾಳಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಷ್ಟಕ್ಕೂ ಜನಾರ್ಧನ ರೆಡ್ಡಿ ಈಗ ನಮ್ಮ ಪಕ್ಷದಲ್ಲಿಲ್ಲ, ನನಗೂ ಅವರಿಗೂ ಯಾವ ಸಂಬಂಧವೂ ಇಲ್ಲ. ಆಂಬಿಡೆಂಟ್ ಚಿಟ್ ಫಂಡ್ ಡೀಲ್ ಪ್ರಕರಣದ ಬಗ್ಗೆ ನನಗೇನೂ ತಿಳಿದಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಜನಾರ್ಧನ್ ರೆಡ್ಡಿ ಬಂಧನಕ್ಕೆ ಬಲೆ ಬೀಸಿದ ಸಿಸಿಬಿ ಪೋಲಿಸ್
ಮುಂದುವರೆದು ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದು ನನಗೆ ಮಾಧ್ಯಮಗಳ ವರದಿಯಿಂದ ತಿಳಿದುಬಂದಿದೆ. ಅದಕ್ಕಿಂತ ಹೆಚ್ಚಾಗಿ ಯಾವುದೇ ವಿಶೇಷ ಮಾಹಿತಿ ಇಲ್ಲ. ತಪ್ಪಿತಸ್ಥರು ಯಾರೇ ಆಗಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಯಡಿಯೂರಪ್ಪ ಹೇಳಿದರು.