ಶಿವಮೊಗ್ಗ: ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಸಹಮತವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಬಾರದು. ಈ ಪ್ರಸ್ತಾಪವನ್ನು ನಾನು ಬೆಂಬಲಿಸುವುದಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಸರ್ಕಾರ ಕಡೆಗಣಿಸಿದೆ, ಅಭಿವೃದ್ಧಿ ಕೆಲಸ ಆಗಿಲ್ಲ ಎಂದಾದರೆ ಎಲ್ಲಾ ಒಟ್ಟಾಗಿ ಹೋರಾಟ ಮಾಡೋಣ. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದರು.


ಇನ್ನು, ಸಂಸದರಿಗೆ ಐಫೋನ್ ಗಿಫ್ಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಸಬೇಕು. ಇದರಿಂದ ಕಳೆದ ಸರ್ಕಾರದ ಆಡಳಿತ ತಿಳಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.


ಕಾವೇರಿ ಸಮಸ್ಯೆ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಇತರ ವಿಚಾರಗಳ ಕುರಿತಂತೆ ಬುಧವಾರ ದೆಹಲಿಯಲ್ಲಿ ಸಭೆ ನಡೆಸುವ ಬಗ್ಗೆ ಎಲ್ಲಾ ಸಂಸದರಿಗೂ ಆಹ್ವಾನ ನೀಡಲಾಗಿತ್ತು. ಆ ಆಹ್ವಾನದೊಂದಿಗೆ ಎಲ್ಲ ಸಂಸದರಿಗೆ ಸರ್ಕಾರದ ಕಡೆಯಿಂದ ದುಬಾರಿ ಬೆಲೆಯ ಐಫೋನ್ ಗಿಫ್ಟ್ ನಿದಲಾಗಿತ್ತು. ಇದೀಗ ಈ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.