ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯಿಲ್ಲ: ಪ್ರಜ್ವಲ್ ರೇವಣ್ಣ
ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಜ್ವಲ್.
ಪಕ್ಷದ ಹಿರಿಯರು ಸೂಚನೆ ನೀಡಿದರೆ ಮಾತ್ರ ವಿಧಾನಸಭಾ ಚುನಾವ್ಣೆಯಲ್ಲಿ ಸ್ಪರ್ಧಿಸುತ್ತೇನೆ, ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸ್ಪಷ್ಟ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜಕೀಯ ಜೀವನದಲ್ಲಿ ಜನರಿಂದ ಬೆಂಬಲ ಪಡೆದು ಮುಂದೆ ಬರುತ್ತೇನೆಯೇ ಹೊರತು ಪರೋಕ್ಷವಾಗಿ ರಾಜಕಾರಣ ಮಾಡುವುದಿಲ್ಲ. ವಿಧಾನ ಸಭಾ ಚುನಾವಣೆಗೆ ಟಿಕೇಟ್ ದೊರೆಯದೆ ಇದ್ದರೆ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಳ್ಳುತ್ತೇನೆ. ರಾಜಕೀಯ ಸಂಬಂಧಿಸಿದಂತೆ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣಗೆ ಟಿಕೇಟ್ ನೀಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಡ್ಡಿ ಮುರಿದಂತೆ ಹೇಳಿದ್ದರು.