ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ನೀಡಿರುವ ರಾಜೀನಾಮೆ ಅಂಗೀಕರಿಸದಿದ್ದರೆ ಶಾಸಕ ಸ್ಥಾನವೂ ಬೇಡ ಎಂದು ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಇರುವ ರಾಜಕೀಯ ಅನುಭವವನ್ನು ಮುಖ್ಯಮಂತ್ರಿಗಳಾಗಲೀ, ಸಿದ್ದರಾಮಯ್ಯ ಅವರಾಗಲೀ ಉಪಯೋಗಿಸಿಕೊಂಡಿಲ್ಲ. ಹೀಗಿರುವಾಗ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸಿ, ಹೆಚ್.ಡಿ.ಕುಮಾರಸ್ವಾಮಿ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಮಾಧ್ಯಮಗಳ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಮನವಿ ಮಾಡುತ್ತೇನೆ ಎಂದು ಹೇಳಿದರು.


ಅಷ್ಟೇ ಅಲ್ಲದೆ, ಒಂದು ವೇಳೆ ನನ್ನ ರಾಜಿನಾಮೆ ಅಂಗೀಕರಿಸದಿದ್ದರೆ, ಹುಣಸೂರು ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೇ ನೀಡುವುದಾಗಿ ಹೆಚ್.ವಿಶ್ವನಾಥ್ ಬಾಂಬ್ ಸಿಡಿಸಿದ್ದಾರೆ. ಇನ್ನಾದರೂ ದೇವೇಗೌಡರು ವಿಶ್ವನಾಥ್ ಅವರ ರಾಜೀನಾಮೆ ಅಂಗೀಕರಿಸುತ್ತಾರೆಯೇ, ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.