ಗೋಕಾಕ್: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಕೊಟ್ಟ ಭರವಸೆಗಳನ್ನು ಈಡೇರಿಸದ ಮೋದಿ, ಇದೀಗ ಚುನಾವಣೆ ವೇಳೆ ಹೊಸ ಹೊಸ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆರೋಪಗಳ ಸುರಿಮಳೆಗೈದರು.
ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಇದನ್ನೂ ಓದಿ: CSK ಬ್ಯಾಟರ್ ಶಿವಂ ದುಬೆ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿ.. ಅಪರೂಪದ ಅಂದಕ್ಕೆ ಮಣಿದು ಆಕೆಯನ್ನೇ 2 ಬಾರಿ ಮದುವೆಯಾದ ದುಬೆ
ಈ ಚುನಾವಣೆಯಲ್ಲಿ ನೀವು ಕೊಡುವ ತೀರ್ಪು, ದೇಶದ ಭವಿಷ್ಯವನ್ನು ಬದಲಿಸುವ ತೀರ್ಪು. ಕೇಂದ್ರ ಕೊಟ್ಟ ಭರವಸೆಗಳಲ್ಲಿ ಎಷ್ಟು ಈಡೇರಿವೆ? ದೇಶದ ಜನರಿಗೆ ಮೋದಿ ಸರಣಿ ಸುಳ್ಳು ಗಳನ್ನು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
2013ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ಜನಸಾಮಾನ್ಯರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನ ಮಾಡಿದೆವು. ಪ್ರಧಾನಿ ಮನಮೋಹನ್ ಸಿಂಗ್ ಕಾಲದಲ್ಲಿ ಆಹಾರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಆದರೆ, ಇದರ ಕ್ರೆಡಿಟ್ ಪಡೆಯಲು ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ವಿದೇಶದಲ್ಲಿರುವ ಕಪ್ಪು ಹಣ ತಂದು, ಎಲ್ಲರ ಅಕೌಂಟ್ ಗೆ 15 ಲಕ್ಷ ರೂಪಾಯಿ ಹಾಕಲಾಗುವುದು ಎಂದರು. 10 ವರ್ಷ ಆದರೂ ಒಂದು ಪೈಸೆ ಬರಲಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ. ಕನಿಷ್ಟ 20 ಲಕ್ಷ ಉದ್ಯೋಗ ಕೊಡಲಿಲ್ಲ. ಬದಲಿಗೆ ನಿರುದ್ಯೋಗಿಗಳ ಸಂಖ್ಯೆ ಜಾಸ್ತಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಹಿಂದಿನ ಚುನಾವಣೆಯಲ್ಲಿ ಆರ್ಟಿಕಲ್ 370, ಪುಲ್ವಾಮ ದಾಳಿ, ಸರಣಿ ಸುಳ್ಳುಗಳನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಅಧಿಕಾರಕ್ಕೇರಿದ್ದರು. ಇದೀಗ ಮತ್ತೆ ಮೋದಿ ಹತಾಶೆಯಿಂದ ಸುಳ್ಳು ಹೇಳಲು ಶರುಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಕೊಡುತ್ತಾರೆ ಎಂದು ಮೋದಿ ಸುಳ್ಳು ಹೇಳಲು ಶುರು ಮಾಡಿದ್ದಾರೆ. ಕರ್ನಾಟಕದ ಬಗ್ಗೆ ಅನೇಕ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಅಧಿಕಾರಿಗಳಿಗೆ ಸಂಬಳ ಕೊಡಲು ಹಣ ಇಲ್ಲ. ಎಂದು ಸುಳ್ಳು ಹೇಳಲಾಗ್ತಿದೆ. ನಾವು ಅಧಿಕಾರಕ್ಕೆ ಬಂದಾಗ ಯಾರಿಗೂ ಸಂಬಳವೇ ಆಗಿರಲಿಲ್ಲ, ಎಲ್ಲರಿಗೂ ಸಂಬಳ ಮಾಡಿ, ನಂತರ ಕೂಡ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಗೃಹ ಜ್ಯೋತಿ, ಗೃಹಲಕ್ಷ್ಮಿ ಶಕ್ತಿ ಯೋಜನೆಗಳಿಂದ ಮಹಿಳೆಯರಿಗೆ ಸಬಲೀಕರಣಕ್ಕೆ ಅನುಕೂಲವಾಗಿದೆ. ಕರ್ನಾಟಕ, ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಮೇಲೆ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ನಂಬಿಕೆ ಬಂದಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ನೀಡಲಾಗುವುದು ಎಂದರು.
ಇದನ್ನೂ ಓದಿ: ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎಷ್ಟು ಕೋಟಿ ಒಡೆಯ ಗೊತ್ತಾ? ವಿರಾಟ್ ಆದಾಯಕ್ಕಿಂತ ಹೆಚ್ಚೇ ಇದೆ ಹಿಟ್ ಮ್ಯಾನ್ INCOME!
ಮೃಣಾಲ್ ಅಲ್ಲ, ನಾನೇ ಅಭ್ಯರ್ಥಿ
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿದರೆ ನನಗೆ ಆಶೀರ್ವಾದ ಮಾಡಿದಂತೆ ಆಗುತ್ತೆ. ಈ ಕ್ಷೇತ್ರದ ಅಭ್ಯರ್ಥಿ ನಾನೇ, ಲಕ್ಷ್ಮೀ ಹೆಬ್ಬಾಳಕರ್ ಮಗ ಅಲ್ಲ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನನಗೆ ಶಕ್ತಿ ಬಂದಂತೆ ಆಗುತ್ತದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ