"ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ."

Last Updated : Dec 2, 2021, 03:02 AM IST
  • ಕರ್ನಾಟಕದ ಹೆಮ್ಮೆಯ ಚಾಲುಕ್ಯ ದೊರೆ ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ.
  • ಮೂರ್ತಿಯನ್ನು ವಿಧಾನಸೌಧದ ಆವರಣದಲ್ಲಿಯೇ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಪಡಿಸುತ್ತೇನೆ" ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ.
 "ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ." title=
file photo

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಚಾಲುಕ್ಯ ದೊರೆ ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ.ಮೂರ್ತಿಯನ್ನು ವಿಧಾನಸೌಧದ ಆವರಣದಲ್ಲಿಯೇ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಪಡಿಸುತ್ತೇನೆ" ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: Vicky Kaushal-Katrina Kaif ಮದುವೆಗೆ ಹಾಜರಾಗುವುದಿಲ್ಲ ಎಂದು ಹೇಳಿದ ಗಜರಾಜ್ ರಾವ್..!

ಇಮ್ಮಡಿ ಪುಲಕೇಶಿ ಅವರ ಪ್ರತಿಮೆ ಸ್ಥಾಪಿಸುವ ಕುರಿತಾಗಿ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಈಗ ಸಿದ್ಧರಾಮಯ್ಯನವರ ಹೇಳಿಕೆ ಬಂದಿದೆ."ನಾಡದೊರೆ ಇಮ್ಮಡಿ ಪುಲಿಕೇಶಿಯ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಬೇಕು.ಕನ್ನಡದ ಅಸ್ಮಿತೆಯಾಗಿರುವ ಕನ್ನಡಿಗ ದೊರೆಯ ಸಾಧನೆಯನ್ನು ವಿಸ್ತೃತವಾಗಿ ನಮ್ಮ ಪಠ್ಯಪುಸ್ತಕಗಳಲ್ಲಿ ಕೂಡಾ ಸೇರಿಸಬೇಕು" ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಡೆಯಲಿದೆ ಕತ್ರಿನಾ- ವಿಕ್ಕಿ ಕೌಶಲ್ ವಿವಾಹ, ಮದುವೆಯಲ್ಲಿ ಭಾಗಿಯಾಗಲಿರುವ ಅತಿಥಿಗಳ ಪಟ್ಟಿ ಇಲ್ಲಿದೆ

"ಬಾದಾಮಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡುಮಹಾರಾಷ್ಟ್ರವೂ ಸೇರಿದಂತೆ ಕರ್ನಾಟಕವನ್ನು ಆಳಿದ ಇಮ್ಮಡಿ ಪುಲಿಕೇಶಿ ತನ್ನ ಚಿಂತನೆ ಮತ್ತು ಧೋರಣೆಗಳಲ್ಲಿ ಜನಪರ, ಜಾತ್ಯತೀತ ಮತ್ತು ಅಭಿವೃದ್ದಿಯ ಹರಿಕಾರನೂ ಆಗಿದ್ದ. ವಿಳಂಬವಾಗಿಯಾದರೂ ಅರ್ಹಗೌರವ ಸಲ್ಲಿಕೆಯಾಗಬೇಕು" ಎಂದು ಸಿದ್ಧರಾಮಯ್ಯನವರು ಮಾಧ್ಯಮದ ವರದಿಯೊಂದನ್ನು ಉಲ್ಲೇಖಿಸಿ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ವೇದಿಕೆಯ ಮೂಲಕ ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News