HD Kumaraswamy : ತಾಯಿಗೆ IT ನೊಟೀಸ್ ನೀಡಿರುವ ಬಗ್ಗೆ ಆತಂಕ ಇಲ್ಲ : ಎಚ್ಡಿ ಕುಮಾರಸ್ವಾಮಿ
ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ ಎಂದರು.
ಬೆಂಗಳೂರು : ನಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ(HD Kumaraswamy), ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ ಎಂದರು.
ಇದನ್ನೂ ಓದಿ : ‘ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ’
ದೇವೆಗೌಡರ(HD Deve Gowda) ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದು ಮಹತ್ವ ಕೊಟ್ಟಿಲ್ಲ. ನಾವು ಸಹ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಪ್ರಾಮುಖ್ಯತೆ ಕೊಟ್ಟವರಲ್ಲ. ನಾವು ಪರಿಶುದ್ಧವಾಗಿರಬೇಕು ಅಷ್ಟೇ. ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ನನ್ನ ಸಹೋದರ ರೇವಣ್ಣ ಅವರಿಗೂ ಇದನ್ನೇ ಹೇಳಿದ್ದೇನೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಆದಾಯ ತೆರಿಗೆ(Income Tax) ಬಗ್ಗೆ ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರುತ್ತಾರೆ. ಆ ವಿವರಗಳನ್ನು ಸಲ್ಲಿಕೆ ಮಾಡಿದರೆ ಆಯಿತು ಎಂದು ಅವರು ತಿಳಿಸಿದರು.
ಇದನ್ನೂ ಓದಿ : ಸುಸುತ್ರವಾಗಿ ನಡೆದ SSLC ಪರೀಕ್ಷೆ- ಹಿಜಾಬ್ ಗಿಂತ ಶಿಕ್ಷಣವೇ ಮುಖ್ಯ ಎಂಬಂತೆ ಪರೀಕ್ಷೆಗೆ ಹಾಜರಾದ ಮುಸ್ಲಿಂ ವಿದ್ಯಾರ್ಥಿನಿಯರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.