"ಸಿದ್ದರಾಮಯ್ಯ ಅವರಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ"

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ  ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ  ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Written by - Zee Kannada News Desk | Last Updated : Aug 20, 2022, 12:10 AM IST
  • ಅದರ ಜೊತೆಗೆ ಡಿಜಿ ಅವರನ್ನು ಕರೆದು ಮಾತನಾಡಿದ್ದು ಈ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು.
"ಸಿದ್ದರಾಮಯ್ಯ ಅವರಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ" title=

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ  ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ  ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಎರಡನೇ ಹಂತದ ಮೆಟ್ರೋ ಕಾಮಗಾರಿ: ಸುರಂಗ ಕೊರೆದು ಹೊರಬಂದ ಟಿಬಿಎಂ ಮಿಷನ್

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ಅಥವಾ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು  ನೀಡಲು ತಿಳಿಸಿದ್ದೇನೆ ಎಂದರು.

ಇದನ್ನೂ ಓದಿ: Rajinikanth as Governor: ರಾಜ್ಯಪಾಲರಾಗಿ ನೇಮಕವಾಗಲಿದ್ದಾರಾ ರಜನಿಕಾಂತ್‌?

ಅದರ ಜೊತೆಗೆ ಡಿಜಿ ಅವರನ್ನು ಕರೆದು ಮಾತನಾಡಿದ್ದು ಈ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಎರಡೂ ಕಡೆ ಇದು ನಡೆಯುತ್ತಿದ್ದು, ಇನ್ನೊಬ್ಬರ ಮನಸ್ಸನ್ನು ಕೆಡಿಸುವ ಪ್ರಚೋದನಕಾರಿ ಹೇಳಿಕೆಯನ್ನು ಕೊಡಬಾರದು. ಈ ಬಗ್ಗೆ ಕಟ್ಟುನಿಟ್ಟಾಗಿ ಆದೇಶಗಳನ್ನು ನೀಡಿ. ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆಯನ್ನು ಹೆಚ್ಚಾಗಿ ನೀಡಬೇಕು. ಎಂದು ಸೂಚಿಸಿರುವುದಾಗಿ  ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News