ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಇಂದು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಕೃಷಿ ಭೂಮಿ ಸಂಪೂರ್ಣ ಹಾಳಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇವರ ಸಮಸ್ಯೆಗಳ ನಿವಾರಣೆಗೆ ದೇವರೆ ದಾರಿ ತೋರಿಸಬೇಕು ಎಂದು ನುಡಿದರು.

Last Updated : Oct 14, 2019, 05:21 PM IST
ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ: ಹೆಚ್.ಡಿ.ಕುಮಾರಸ್ವಾಮಿ title=

ಮಂಡ್ಯ: ನಾನು ಎಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ಅಧಿಕಾರದ ಆಸೆಯೂ ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಹದೇವಪುರ ಗ್ರಾಮದ ಮಹದೇಶ್ವರ ಸ್ವಾಮಿ ದೇವಸ್ಥಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಇಂದು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಕೃಷಿ ಭೂಮಿ ಸಂಪೂರ್ಣ ಹಾಳಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇವರ ಸಮಸ್ಯೆಗಳ ನಿವಾರಣೆಗೆ ದೇವರೆ ದಾರಿ ತೋರಿಸಬೇಕು ಎಂದು ನುಡಿದರು.

ಮುಂದುವರೆದು ಮಾತನಾಡುತ್ತಾ ತಾವು ಸಿಎಂ ಆಗಿದ್ದ ದಿನಗಳನ್ನು ನೆನೆದ ಕುಮಾರಸ್ವಾಮಿ, ನನ್ನ ಅಧಿಕಾರವಧಿಯಲ್ಲಿ ಸುಮಾರು 200ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೆಲ್ಲರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದೆ. ಕೇವಲ 14 ತಿಂಗಳ ಅಧಿಕಾರವಧಿಯಲ್ಲಿ ಲಕ್ಷಾಂತರ ರೈತ ಕುಟುಂಬಗಳ ಸಾಲ ಮನ್ನಾ ಮಾಡಿದ್ದೇನೆ. ಆದರೆ ಇದು ಪ್ರಚಾರವಾಗಲಿಲ್ಲವಷ್ಟೇ. ಸರ್ಕಾರದ ಖಜಾನೆಯಲ್ಲಿ ಸಾಕಷ್ಟು ಹಣವಿದೆ. ಕೊರತೆಯೇನಿಲ್ಲ. ಇದನ್ನು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ನಿರ್ಧರಿಸಿದ್ದೆ. ಆದರೆ ಅಷ್ಟರಲ್ಲಿ ಅಧಿಕಾರದಿಂದ ಇಳಿಯಬೇಕಾಯಿತು ಎಂದು ನುಡಿದರು.

Trending News