ಹಿಂದಿ ದಿವಸದ ಆಚರಣೆಗೆ ನನ್ನ ವಿರೋಧವಿದೆ: ಸಿದ್ದರಾಮಯ್ಯ
ನಮ್ಮ ವಿರೋಧ ಹಿಂದಿ ಎಂಬ ಭಾಷೆ ಬಗ್ಗೆ ಅಲ್ಲ, ಅದರ ಬಲವಂತದ ಹೇರಿಕೆ ಬಗ್ಗೆ. ಹಿಂದಿ ದಿವಸದ ಆಚರಣೆಗೆ ನನ್ನ ವಿರೋಧವೂ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಆರಂಭದಿಂದಲೂ ಬಲವಂತದ ಹಿಂದಿ ಹೇರಿಕೆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು, ಮತ್ತೊಮ್ಮೆ ಕಿಡಿ ಕಾರಿದ್ದಾರೆ.
ರಾಷ್ಟ್ರೀಯ ಹಿಂದಿ ದಿವಸವಾದ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಭಾಷೆಗಳು ಜ್ಞಾನದ ಕಿಂಡಿಗಳು, ಅದನ್ನು ಪ್ರೀತಿಯಿಂದ ಬೆಳೆಸಬೇಕೇ ಹೊರತು ಒತ್ತಡ-ಒತ್ತಾಯದ ಮೂಲಕ ಅಲ್ಲ. ನಮ್ಮ ವಿರೋಧ ಹಿಂದಿ ಎಂಬ ಭಾಷೆ ಬಗ್ಗೆ ಅಲ್ಲ, ಅದರ ಬಲವಂತದ ಹೇರಿಕೆ ಬಗ್ಗೆ. ಹಿಂದಿ ದಿವಸದ ಆಚರಣೆಗೆ ನನ್ನ ವಿರೋಧವೂ ಇದೆ" ಎಂದಿದ್ದಾರೆ.
ಮೊದಲು ದೇಶದಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂಬ ಸುಳ್ಳು ಪ್ರಚಾರ ನಿಲ್ಲಲಿ. ಅದು ಕನ್ನಡದಂತೆಯೇ 22 ಅಧಿಕೃತ ಭಾಷೆಗಳಲ್ಲಿ ಒಂದು ಎನ್ನುವುದು ತಿಳಿದಿರಲಿ. ಸುಳ್ಳು-ತಪ್ಪು ಮಾಹಿತಿ ಮೂಲಕ ಭಾಷೆಯನ್ನೂ ಬೆಳಸಲಾಗದು, ಭಾಷೆ ಪರಸ್ಪರ ಪ್ರೀತಿ ಮತ್ತು ಕೊಡು, ಕೊಳ್ಳುವಿಕೆಯಿಂದ ಬೆಳೆಯುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.
[[{"fid":"180682","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]