`ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ:ಮೂರು ತಿಂಗಳು ಹಿಂದೆಯೇ ಇದನ್ನ ಭವಿಷ್ಯ ನುಡಿದಿದ್ದೆ!`
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಇಂತಹ ವಿಚಾರಗಳು ಆಗಲಿದೆ ಎಂದು ಮೂರು ತಿಂಗಳ ಹಿಂದೆಯೇ ಭವಿಷ್ಯ ನುಡಿದ್ದಿದ್ದೆ ಎಂದು ವಿಧಾನಸೌಧದಲ್ಲಿ ತಿಳಿಸಿದರು.
ಬೆಂಗಳೂರು: ಕರಾವಳಿ ಭಾಗದಲ್ಲಿ ಮುಸ್ಲಿಂ ಸಮುದಾಯ ವ್ಯಾಪಾರಿಗಳಿಗೆ ನಿಷೇಧ ಹೇರಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಇಂತಹ ವಿಚಾರಗಳು ಆಗಲಿದೆ ಎಂದು ಮೂರು ತಿಂಗಳ ಹಿಂದೆಯೇ ಭವಿಷ್ಯ ನುಡಿದ್ದಿದ್ದೆ ಎಂದು ವಿಧಾನಸೌಧದಲ್ಲಿ ತಿಳಿಸಿದರು.
ಇದನ್ನೂ ಓದಿ: Cyber Security Policy: ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಅಶ್ವತ್ಥನಾರಾಯಣ
ಹಿಜಾಬ್ ಪ್ರಕರಣ ಪ್ರಾರಂಭ ಆದಾಗ ಬಿಜೆಪಿ ಭಾವನಾತ್ಮಕ ವಿಷಯಗಳನ್ನ ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕೋಮು ಸೌಹಾರ್ದ ಬಳಸಿಕೊಳ್ಳುವ ಹುನ್ನಾರ ಹಾಕಿದ್ದಾರೆ.ಕರಾವಳಿ ಪ್ರದೇಶಗಳಲ್ಲಿ ಇದ್ದ ಅವರ ರಾಜಕೀಯ ಡ್ರಾಮ ಈಗ ಹಂತ ಹಂತವಾಗಿ ತೆಗೆದುಕೊಂಡು ಹೊರಟಿದ್ದಾರೆ.ಅದಕ್ಕೆ ಜನರು ಅಂತಿಮವಾಗಿ ಯಾವ ತೀರ್ಮಾನ ತೆಗೆದುಕೊಳ್ತಾರೆ ಕಾದು ನೋಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: Ravindra Jadeja : ಒಂದು ವಾರದಲ್ಲಿ ನಂಬರ್-1 ಸ್ಥಾನ ಕಳೆದುಕೊಂಡ ರವೀಂದ್ರ ಜಡೇಜಾ!
ಇನ್ನು ಬೆಲೆ ಏರಿಕೆ ವಿಷಯ ಸದನದಲ್ಲಿ ಪ್ರಸ್ತಾಪಿಸುವ ಬಗ್ಗೆ ಉತ್ತರಿಸಿದ ಇವರು,ಪ್ರಧಾನಿ ಮೋದಿ ಆಡಳಿತದಲ್ಲಿ ಜನ ಸಂಪತ್ ಭರಿತರಾಗಿದ್ದಾರೆ.ಹೀಗಾಗಿ ಜನ ಬೆಲೆ ಏರಿಕೆ ಬಗ್ಗೆ ತಲೆಕೆಡಿಸಿಕೊಳ್ತಿಲ್ಲ.ಬೆಲೆ ಏರಿಕೆ ಬಗ್ಗೆ ಈಗ ಜನ ಪ್ರತಿಭಟನೆ ಮಾಡ್ತಾ ಇಲ್ಲ.ನಾವು ಸಂಘಟನೆ ಮಾಡಿ ಹೋರಾಟ ಮಾಡಬೇಕಿದೆ.ಇಲ್ಲವಾದರೆ ಜನ ಸ್ವಯಂ ಪ್ರೇರಣೆಯಿಂದ ಹೋರಾಟ ಮಾಡುವುದಿಲ್ಲ.ಜನ ಇನ್ನು ಎಚ್ಚೆತ್ತುಕೊಳ್ಳದೆ ಇದ್ರೆ ಮುಂದೆ ಏನ್ ದುರಂತ ಕಾದಿದೆಯೊ ಗೊತ್ತಿಲ್ಲ ಎಂದು ಎಚ್ಚರಿಕೆ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.