ಹರ್ಷ ಹತ್ಯೆ ಪೂರ್ವನಿಯೋಜಿತ, ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯ: ಸಚಿವ ಕೆ.ಸುಧಾಕರ್

ಕೆಲ ವರ್ಷಗಳಿಂದ ದೇಶದಲ್ಲಿ ಹಿಂದೂ ಕಾರ್ಯಕರ್ತರನ್ನು ಪೂರ್ವ ನಿಯೋಜಿತವಾಗಿ ಕೊಲೆ ಮಾಡಲಾಗುತ್ತಿದೆ. ಇಂತಹ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು.

Written by - Zee Kannada News Desk | Last Updated : Feb 21, 2022, 06:26 PM IST
  • ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪೂರ್ವ ನಿಯೋಜಿತವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ
  • ಹಿಂದೂ ಕಾರ್ಯಕರ್ತರು ಆತಂಕ ಪಡಬೇಕಿಲ್ಲ, ಅವರ ಬೆಂಬಲಕ್ಕೆ ನಾವಿದ್ದೇವೆ
  • ಎಲ್ಲಾ ಧರ್ಮಗಳಂತೆ ಹಿಂದೂ ಧರ್ಮದ ರಕ್ಷಣೆ ಮಾಡಲು ಸರ್ಕಾರ ಬದ್ಧವೆಂದ ಸಚಿವ ಸುಧಾಕರ್
ಹರ್ಷ ಹತ್ಯೆ ಪೂರ್ವನಿಯೋಜಿತ, ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯ: ಸಚಿವ ಕೆ.ಸುಧಾಕರ್ title=
'ಹಿಂದೂ ಕಾರ್ಯಕರ್ತರು ಆತಂಕ ಪಡಬೇಕಿಲ್ಲ'

ಬೆಂಗಳೂರು: ಹಿಂದೂ ಧರ್ಮಕ್ಕಾಗಿ ಕೆಲಸ ಮಾಡಿದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಬರ್ಬರ ಹತ್ಯೆ(Shivamogga Youth Murder Case) ಪೂರ್ವ ನಿಯೋಜಿತ ಕೃತ್ಯವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್(K Sudhakar) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹತ್ಯೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ವಹಿಸಲಿದೆ ಅಂತಾ ಹೇಳಿದ್ದಾರೆ.

ಈ ದುಷ್ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಮತ್ತು ಗೃಹ ಸಚಿವ ಆರಗ ಜ್ನಾನೇಂದ್ರ(Aaraga Jnanendra) ಅವರಿಗೆ ಮನವಿ ಮಾಡುತ್ತೇನೆ. ಇಂತಹ ಘಟನೆಗಳಿಂದ ಹಿಂದೂ ಕಾರ್ಯಕರ್ತರಲ್ಲಿ ಆತಂಕ ಉಂಟಾಗುತ್ತದೆ. ಹಿಂದೂ ಕಾರ್ಯಕರ್ತರೊಂದಿಗೆ ನಾನು ಸದಾ ಬೆಂಬಲವಾಗಿ ನಿಲ್ಲುತ್ತೇನೆ. ಇಲ್ಲಿ ಒಂದು ಕಡೆ ರಾಷ್ಟ್ರೀಯವಾದ, ಮತ್ತೊಂದೆಡೆ ಮೂಲಭೂತವಾದ ಕಾಣಿಸುತ್ತಿದೆ. ದೇಶದಲ್ಲಿ ಅಶಾಂತಿ ನೆಲೆಸಲು ಬೇರೆ ದೇಶದವರ ಕುಮ್ಮಕ್ಕು ಕೂಡ ಇದೆ ಎಂದೂ ಅನ್ನಿಸುತ್ತಿದೆ. ಈ ಬಗ್ಗೆ ಗೃಹ ಸಚಿವರಿಗೆ ಮನವಿ ಮಾಡಿ, ಇಂತಹ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ವಹಿಸಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಬೇಕು ಎಂದು ಕೋರುತ್ತೇನೆ ಎಂದರು.

ಇದನ್ನೂ ಓದಿ: Siddaramaiah: ‘ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲದ ಆರಗ ಜ್ನಾನೇಂದ್ರ ರಾಜೀನಾಮೆ ನೀಡಲಿ’

ಈ ಘಟನೆಯಿಂದ ಮನಸ್ಸಿಗೆ ಬಹಳ ನೋವಾಗಿದೆ. ಹತ್ಯೆಗೀಡಾದ ಯುವಕನ ಮನೆಯವರು ಈ ದುಃಖವನ್ನು ಹೇಗೆ ಭರಿಸಲು ಸಾಧ್ಯವೆಂದು ಆಲೋಚಿಸಿ ಬಹಳ ನೋವುಂಟಾಗಿದೆ. ಈ ನೊಂದ ಕುಟುಂಬದೊಂದಿಗೆ ಸರ್ಕಾರ ನಿಂತಿದೆ. ಯಾವುದೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆತಂಕ ಪಡಬೇಕಿಲ್ಲ. ಎಲ್ಲಾ ಧರ್ಮಗಳಂತೆ ನಮ್ಮ ಹಿಂದೂ ಧರ್ಮವನ್ನೂ ರಕ್ಷಣೆ ಮಾಡುತ್ತೇವೆ. ಈ ಘಟನೆಯಿಂದ ಜನರು ಬೀದಿಗೆ ಬರುತ್ತಿದ್ದಾರೆ. ಆದರೆ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸರ್ಕಾರ ಎಲ್ಲರ ರಕ್ಷಣೆಗೆ ಬದ್ಧವಾಗಿದೆ. ಪ್ರತಿಭಟನಾಕಾರರು ಶಾಂತಿಯನ್ನು ಕಾಪಾಡಿಕೊಂಡು ಹೋರಾಟ ಮಾಡಬೇಕು ಎಂದು ಕೋರಿದರು.

ರಾಜಕೀಯ ಬೇಡವೆಂದು ಮನವಿ

ಹಿರಿಯ ನಾಯಕರು ಇಂತಹ ಸಮಯದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ನೊಂದ ಕುಟುಂಬಕ್ಕೆ ಮನೋಸ್ಥೈರ್ಯ ತುಂಬುವ ಕೆಲಸವನ್ನು ಪಕ್ಷಾತೀತವಾಗಿ ಮಾಡಬೇಕು. ಆದರೆ ಇದರಲ್ಲೂ ರಾಜಕೀಯ ಮಾಡಿದರೆ ಅದು ಹೇಯ ಕೃತ್ಯ. ಬಿಜೆಪಿ(BJP) ರಾಷ್ಟ್ರೀಯ ಪಕ್ಷವಾಗಿದ್ದು, ಇದು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಸಂಘಟನೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಟ್ಟ ಪ್ರವೃತ್ತಿಯನ್ನು ಎಂದೂ ಮಾಡುವುದಿಲ್ಲ ಎಂದರು.

ಇದನ್ನೂ ಓದಿ: HD Kumaraswamy: ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಕ್ಷಮೆಯೇ ಇಲ್ಲ’

ಕೆಲ ವರ್ಷಗಳಿಂದ ದೇಶದಲ್ಲಿ ಹಿಂದೂ ಕಾರ್ಯಕರ್ತರನ್ನು ಪೂರ್ವ ನಿಯೋಜಿತವಾಗಿ ಕೊಲೆ ಮಾಡಲಾಗುತ್ತಿದೆ. ಇಂತಹ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಯಾರೇ ಕಾರಣರಾಗಿದ್ದರೂ ಅಥವಾ ಅದು ಯಾವುದೇ ಸಂಘಟನೆಯಾದರೂ ಕ್ರಮ ಕೈಗೊಳ್ಳಲೇಬೇಕು ಎಂದು ಅವರು ಆಗ್ರಹಿಸಿದರು.  

ನಿಯಮ ಪಾಲಿಸಬೇಕು

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಸಂದರ್ಶನವೊಂದರಲ್ಲಿ ಹಿಜಾಬ್ ಕುರಿತು ಅಭಿಪ್ರಾಯ ಹೇಳಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದೂ ತಿಳಿಸಿದ್ದಾರೆ. ಶಾಲೆಯಲ್ಲಿ ಸಮವಸ್ತ್ರದ ನಿಯಮವನ್ನು ಪಾಲಿಸಬೇಕು ಎಂದು ಹೇಳಿದ್ದಾರೆ. ಇದು ಸಹಜವಾದ ಹಾಗೂ ಸರಿಯಾದ ವಿಚಾರ. ಶಿಕ್ಷಣ ಸಂಸ್ಥೆಯ ಎಲ್ಲಾ ನಿಯಮಗಳನ್ನು ಮಕ್ಕಳು ಪಾಲಿಸಬೇಕು ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News