ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ
ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ!
ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.
ಇದನ್ನೂ ಓದಿ- ಅಧರ್ಮದ ಅಮಾನವೀಯ ಕೆಲಸ ಮಾಡಿ ನಾಟಕೀಯ ಪೂಜೆಯನ್ನು ಆ ದೇವರು ಒಪ್ಪಿಕೊಳ್ಳಲ್ಲ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.