ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಪಾರಸು ಮಾಡಿದ ಸಂಬಂಧ ಬಿಜೆಪಿ ಕಾದು ನೋಡುವ ತಂತ್ರವನ್ನು ಅನುಸರಿಸಿದೆ. 


COMMERCIAL BREAK
SCROLL TO CONTINUE READING

ಪ್ರತ್ಯೇಕ ಲಿಂಗಾಯತ ಧರ್ಮ: ಕೇಂದ್ರ ಸರ್ಕಾರಕ್ಕೆ ತಜ್ಞರ ವರದಿ ಶಿಫಾರಸ್ಸು


ಈ ವಿಚಾರವಾಗಿ ಮೌನ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ "ಭಾರತೀಯ ಜನತಾ ಪಕ್ಷ ಇದುವರೆಗೂ ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಂಡಿದ್ದ ನಿರ್ಧಾರಗಳಿಗೆ ಪೂರ್ಣ ಸಹಕಾರ ನೀಡುತ್ತಾ ಬಂದಿದ್ದು, ಈಗ ರಾಜ್ಯ ಸರ್ಕಾರದ ತೀರ್ಮಾನದ ಹಿನ್ನಲೆಯಲ್ಲಿ ಅವಸರವಾಗಿ ಯಾವುದೇ ಹೇಳಿಕೆ ನೀಡುವುದಿಲ್ಲ" ಎಂದಿದ್ದಾರೆ.


ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾನಮಾನಕ್ಕೆ ತಜ್ಞರ ಸಮಿತಿ ರಚಿಸಿದ ಕರ್ನಾಟಕ ಸರ್ಕಾರ


ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಮುಂದೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಾಗಿ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, "ಸಿದ್ದರಾಮಯ್ಯ ಬುದ್ಧಿವಂತಿಕೆಯಿಂದ ತೀರ್ಮಾನಕ್ಕೆ ಬಂದಿದ್ದಾರೆ. ಆದರೆ, ವೀರಶೈವ ಮಹಾಸಭಾದವರು ಏನು ತೀರ್ಮಾನ ತೆಗದುಕೊಳ್ಳುತ್ತಾರೆ ಎನ್ನುವುದನ್ನು ತಿಳಿದು ನಂತರ ನಮ್ಮ ನಿಲುವು ಏನೆಂದು ತಿಳಿಸುವುದಾಗಿ ಹೇಳಿದ್ದಾರೆ.