ಜವಾಹರಲಾಲ್ ನೆಹರೂ ಕಾಶ್ಮೀರ ಬಿಟ್ಟುಕೊಟ್ಟಿದ್ದನ್ನು ಬಿಜೆಪಿ ಸಾಬೀತುಪಡಿಸಿದರೆ ಈ ಕ್ಷಣದಲ್ಲೇ ರಾಜೀನಾಮೆ - ಮಲ್ಲಿಕಾರ್ಜುನ ಖರ್ಗೆ

ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತುಪಡಿಸಿದೆ ಈ ಕ್ಷಣದಲ್ಲಿಯೇ ರಾಜಿನಾಮೆ ನೀಡುವುದಾಗಿ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ. 

Last Updated : Feb 10, 2018, 04:20 PM IST
ಜವಾಹರಲಾಲ್ ನೆಹರೂ ಕಾಶ್ಮೀರ ಬಿಟ್ಟುಕೊಟ್ಟಿದ್ದನ್ನು ಬಿಜೆಪಿ ಸಾಬೀತುಪಡಿಸಿದರೆ ಈ ಕ್ಷಣದಲ್ಲೇ ರಾಜೀನಾಮೆ - ಮಲ್ಲಿಕಾರ್ಜುನ ಖರ್ಗೆ title=

ಬಳ್ಳಾರಿ: ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತುಪಡಿಸಿದೆ ಈ ಕ್ಷಣದಲ್ಲಿಯೇ ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. 

ಇಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಾತನಾಡಿದರು. 

ಕಳೆದ 70 ವರ್ಷಗಳಿಂದ ಕಾಂಗ್ರೆಸ್ ಯಾವ ಸಾಧನೆಯನ್ನೂ ಮಾಡಿಲ್ಲ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಖರ್ಗೆ ಅವರು, ಕಾಂಗ್ರೆಸ್ ಏನೂ ಮಾಡದಿದ್ದರೆ ಚಹಾ ಮಾರುತ್ತಿದ್ದ ನೀವು ಇಂದು ಪ್ರಧಾನಿಯಾಗಲು ಸಾಧ್ಯವಾಗುತ್ತಿತ್ತೆ? ಎಂದು ಪ್ರಶ್ನಿಸಿದರು. 

ನಾವು 70 ವರ್ಷಗಳಿಂದ ಸಂವಿಧಾನವನ್ನು ರಕ್ಷಿಸಿದ್ದೇವೆ. ಆದರೆ ನಿಮ್ಮ ಪಕ್ಷ ಅಧಿಕಾರಕ್ಕೆ ಬಂದು ಸಂವಿಧಾನ ಬದಲಿಸುವ ಮಾತನಾಡುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಮತಗಳಿಸಲು ಸಂವಿಧಾನ ಶಿಲ್ಪಿ ಅಂಬೇಡ್ಕರ್​ ಅವರನ್ನು ನೆನಪಿಸಿಕೊಳ್ಳುತ್ತಿದೆ. ಒಟ್ಟಾರೆ ಬಿಜೆಪಿ ಹೇಳುವುದೆಲ್ಲವೂ ಬರಿ ಸುಳ್ಳಿನ ಕಂತೆ ಎಂದು ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು. 

Trending News