ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ. ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆಯೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು.. ಇವೆರಡೇ ಆಯ್ಕೆ ಉಳಿಯುತ್ತವೆ ಎಂದು ಹೇಳಿದ್ದಾರೆ.
ಬೆಳಗಾವಿ: ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪರ ಮತಯಾಚಿಸಿದ ಬಳಿಕ ಅಥಣಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ ಎಂದು ಹೇಳಿದ್ದಾರೆ.
ʼನಾನು ಯಾರಿಗೂ ಅಪ್ಪಾಜಿ... ಅಪ್ಪಾಜಿ... ಅಂತಾ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾನು ಯಾರಿಗೂ ವಂಚನೆ ಮಾಡುವುದಿಲ್ಲ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಕರ್ನಾಟಕದ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಜಾತಿ ಜಾತಿ ಅಂತಾ ನೋಡದೆ ದೇಶ ಉಳಿಸುವುದಕ್ಕಾಗಿ ಎಲ್ಲರೂ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.
ಇದನ್ನೂ ಓದಿ: ಮೈಸೂರು, ಚಾಮರಾಜ ನಗರ ಗೆಲುವಿಗೆ, ಕಾಂಗ್ರೆಸ್ ರಣತಂತ್ರ
ಇದೇ ವೇಳೆ ಜಾರಕಿಹೊಳಿ ಕುಟುಂಬ ವಿರುದ್ಧ ಗುಡುಗಿದ ಯತ್ನಾಳ್, ಜಾರಕಿಹೊಳಿ ಕಾಲಿಗೆ ನಮಸ್ಕರಿಸಿ, ಸಾಹುಕಾರ್ ಸಾಹುಕಾರ್ ಅಂತಾ ಯಾಕೆ ಅಂತಿರಿ. ಅವರ ಮನೆಯ ತೊಟ್ಟಿಲನಲ್ಲಿರುವ ಕಂದಮ್ಮಗಳಿಗೂ ನಮಸ್ಕರಿಸುತ್ತೀರಿ. ಯಾಕೆ ನಿಮಗೆ ಸ್ವಾಭಿಮಾನ ಇಲ್ಲವೇ? ಎಂದು ಪ್ರಶ್ನಿಸಿದರು. ನಿಮ್ಮ ಜಮೀನಿನಲ್ಲಿ ಕಬ್ಬು ಬೆಳಯುತ್ತೀರಾ ಅಥವಾ ಅವರ ಜಮೀನಿನಲ್ಲಿ ಬೆಳೆಯುತ್ತೀರಾ? ಯಾರಿಗೂ ನಮಸ್ಕರಿಸಬೇಡಿ, ಸ್ವಾವಲಂಬಿಗಳಾಗಿ. ಪ್ರಧಾನಿ ಮೋದಿಯವರೇ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ. ಅಂದಮೇಲೆ ಇವರ ಕಾಲಿಗೆ ಏಕೆ ನಮಸ್ಕಾರ ಮಾಡುತ್ತೀರಿ ಅಂತಾ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ. ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆಯೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು.. ಇವೆರಡೇ ಆಯ್ಕೆ ಉಳಿಯುತ್ತವೆ. ನಮ್ಮ ಅಜ್ಜ, ಮುತ್ತಜ್ಜರು ಟಿಪ್ಪು ಸುಲ್ತಾನ್ ವಿರುದ್ಧ, ಔರಂಗಜೇಬನ ವಿರುದ್ಧ ಹೋರಾಟ ಮಾಡಿದ್ದಕ್ಕೆ ಹಿಂದೂಗಳು ಉಳಿದಿದ್ದೇವೆ. ನಾವು ಯಾರಾದರೂ ಹಿಂದೂಗಳಾಗಿ ಉಳಿದಿದ್ದರೆ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯದಿಂದ ಎಂದು ಇದೇ ವೇಳೆ ಹೇಳಿದರು.
ಇದನ್ನೂ ಓದಿ: ಮುಸಾವಿರ್ ಶಾಜೇನ್ ಹುಸ್ಸೈನ್ ಬಂಧನ, ರಾಮೇಶ್ವರ್ ಕೆಫೆ ಬ್ಲಾಸ್ಟ್ ಪ್ರಕರಣ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.