BS Yediyurappa : ಸಿಎಂ ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ!

ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ

Last Updated : Jun 11, 2021, 01:52 PM IST
  • ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ
  • ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ
  • ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ
BS Yediyurappa : ಸಿಎಂ ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ! title=

ಹಾಸನ : ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್(Arun Singh) ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಹೇಳಿದರು.

ಇದನ್ನೂ ಓದಿ : Heavy Rain : ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಭಾರೀ ಮಳೆ..!

ವಾರಗಳ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹೈಕಮಾಂಡ್(BJP High Command) ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ. ಇಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವಾಗ ರಾಜೀನಾಮೆ ನೀಡಲು ಹೇಳುತ್ತಾರೋ ಆಗಲೇ ಕೊಡುತ್ತೇನೆ ಎಂದಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಸಿಎಂ ಬದಲಾವಣೆಗೆ ಸ್ವಪಕ್ಷೀಯರ ಪ್ರಯತ್ನದ ಮಧ್ಯೆ ಸಿಎಂ ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.

ಇದನ್ನೂ ಓದಿ : ರಾಜ್ಯದಲ್ಲಿ ಕೆಲವು ವಿನಾಯಿತಿಯೊಂದಿಗೆ ಜೂನ್ 21 ರವರೆಗೆ ಲಾಕ್ ಡೌನ್ ವಿಸ್ತರಣೆ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಗುರುವಾರ ಈ ಗೊಂದಲಗಳಿಗೆ ತೆರ ಎಳೆಯುವ ಪ್ರಯತ್ನ ಮಾಡಿದ್ದರು. ಸಿಎಂ ಸ್ಥಾನದಿಂದ ಯಡಿಯೂರಪ್ಪ(BS Yediyurappa) ಅವರನ್ನಾಗಲಿ, ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನಾಗಲಿ ಕೆಳಗಿಳಿಸುವ ಯಾವುದೇ ಯೋಚನೆ ಹೈಕಮಾಂಡ್ ಗೆ ಇಲ್ಲ ಎಂದಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : Karnataka Lockdown Update : ರಾಜ್ಯದ ಈ 8 ಜಿಲ್ಲೆಗಳಲ್ಲಿ ಮತ್ತೆ '1 ವಾರ ಲಾಕ್ ಡೌನ್' ಮುಂದುವರಿಕೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News