ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ.. ಕುಮಾರಸ್ವಾಮಿ ಸಹೋದರನ ಆಸ್ತಿ ಲೆಕ್ಕ ನೀಡಲಿ: ಡಿಸಿಎಂ ಡಿ.ಕೆ ಶಿವಕುಮಾರ್

DK Shivakumar : ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸವಾಲೆಸೆದರು.

Written by - Prashobh Devanahalli | Last Updated : Aug 5, 2024, 12:48 PM IST
  • ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ
  • ಕುಮಾರಸ್ವಾಮಿ ಸಹೋದರನ ಆಸ್ತಿ ಲೆಕ್ಕ ನೀಡಲಿ
  • ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ
ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ.. ಕುಮಾರಸ್ವಾಮಿ ಸಹೋದರನ ಆಸ್ತಿ ಲೆಕ್ಕ ನೀಡಲಿ: ಡಿಸಿಎಂ ಡಿ.ಕೆ ಶಿವಕುಮಾರ್ title=

ಬೆಂಗಳೂರು: ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸವಾಲೆಸೆದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕರ ಭ್ರಷ್ಟಾಚಾರ ಸಮರ್ಥನೆ ವಿಪರ್ಯಾಸ: ಶಾಸಕ ಮಹೇಶ್ ಟೆಂಗಿನಕಾಯಿ 

ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ನಾನು ಅವರ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ ಎಂದರು.

ವಿಜಯೇಂದ್ರ ಹೇಳುತ್ತಾನೆ ಭ್ರಷ್ಟಾಚಾರದ ಪಿತಾಮಹಾ ನಾನು ಎಂದು. ನೀನು ಮೊದಲು ಹೇಳಪ್ಪ, ನೀನು ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ? ಏನಾಯಿತು, ಎಲ್ಲಿ ಬಂತು? ಏಕೆ ಇದೆಲ್ಲಾ ಆಯಿತು ಇದರ ಲೆಕ್ಕಾಚಾರ ಮೊದಲು ನೀಡು. ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್ ಗೆ ಉತ್ತರ ಕೊಡಿ ಆನಂತರ ನನಗೆ ಕೊಡುವಿರಂತೆ ಎಂದು ಹೇಳಿದರು.

ಇಂದು ಮದ್ದೂರಿನಲ್ಲಿ ಜನಾಂದೋಲನ ಯಾತ್ರೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ ಹಾಗೂ ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಏನೇನು ಮಾಡಿದ್ದರು ಅದಕ್ಕೆಲ್ಲ ಉತ್ತರ ಕೊಡಿ ಎಂದು ಕೇಳುತ್ತಿದ್ದೇವೆ. ಇದಕ್ಕಾಗಿ ಜನಾಂದೋಲನ ಸಭೆ ನಡೆಸುತ್ತಿದ್ದೇವೆ ಎಂದರು.

ಇದನ್ನೂ ಓದಿ:  IBPSನಿಂದ 4,455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News