ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ನಾನೇ ವಹಿಸುತ್ತೇನೆ: ಶ್ರೀರಾಮುಲು

ತೆಲಂಗಾಣ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಹೋರಾಟದಂತೆ ಕರ್ನಾಟಕದಲ್ಲಿಯೂ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮುಲು ಎಚ್ಚರಿಸಿದ್ದಾರೆ.

Last Updated : Jul 27, 2018, 01:35 PM IST
ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ನಾನೇ ವಹಿಸುತ್ತೇನೆ: ಶ್ರೀರಾಮುಲು title=

ಬಳ್ಳಾರಿ: ಪ್ರತ್ಯೇಕ ರಾಜ್ಯ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ಹೋರಾಟದ ನೇತೃತ್ವ ವಹಿಸಿಕೊಳ್ಳಲು ನಾನು ಸಿದ್ಧ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. 

ಇಂದು ಬಳ್ಳಾರಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಮೋಸ ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆ. ಈ ಸಂಬಂಧ ಉತ್ತರ ಕರ್ನಾಟಕದ ಎಲ್ಲಾ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಅನ್ಯಾಯ ಮುಂದುವರೆದರೆ ತೆಲಂಗಾಣ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಹೋರಾಟದಂತೆ ಕರ್ನಾಟಕದಲ್ಲಿಯೂ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮುಲು ಎಚ್ಚರಿಸಿದರು.

ಮುಂದುವರೆದು ಮಾತನಾಡಿದ ಅವರು, ಅಖಂಡ ಕರ್ನಾಟಕವೇ ನಮ್ಮ ಆಶಯ ಕೂಡ. ರಾಜ್ಯ ವಿಭಜನೆ ಮಾಡುವ ಯಾವುದೇ ದುರುದ್ದೇಶ ನಮಗಿಲ್ಲ. ಆದರೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಭಾಗದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ನೀತಿಯಿಂದಾಗಿ ಪ್ರತ್ಯೇಕ ರಾಜ್ಯಕ್ಕೆ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಈ ಹೋರಾಟದ ನೇತೃತ್ವ ನಾನೇ ವಹಿಸುತ್ತೇನೆ ಎಂದು ಶ್ರೀರಾಮುಲು ಹೇಳಿದರು.

Trending News