ಬೆಂಗಳೂರು: ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ, ಅವರಿಗೆ ಇವರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿಯ ಉನ್ನತ ಮಟ್ಟದ ಸಭೆಯಲ್ಲಿ ಖಡಕ್ ಆಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು" ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ,ಯಾವ ಯೋಜನೆಯಡಿ ಆ ಕೆಲಸ ಆಗಿದೆ,ಅದಕ್ಕೆ ಆಗಿರುವ ಖರ್ಚು ವಿವರ, ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಒದಗಿಸಬೇಕು.ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು ಯತಾಸ್ಥಿತಿಯಲ್ಲಿ ತಡೆ ಹಿಡಿಯಬೇಕು.ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು.ಯಾವ, ಯಾವ ಕಾಮಗಾರಿಗೆ ಕೆಲಸ ಆಗದಿದ್ದರೂ ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ ಎಂಬ ಬಗ್ಗೆ ತನಿಖೆ ಮಾಡಿ 10 ದಿನದೊಳಗೆ ಪಟ್ಟಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: MLA ಅಲ್ಲ, MLC ಅಂತು ಅಲ್ಲವೇ ಅಲ್ಲ..! ಯಾರು ಈ ನೂತನ ಸಚಿವ ʼಬೋಸರಾಜುʼ..?
ಇನ್ನೂ ಮುಂದುವರೆದು ಮಾತನಾಡಿದ ಅವರು 'ಇಲ್ಲಿ ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡುತ್ತೇನೆ.ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ.ನಾನು ಹಳ್ಳಿಯಿಂದ ಬಂದಿದ್ದರೂ ನನಗೆ ಈ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ.ಮಾಹಿತಿ ಪಡೆಯುವ ಶಕ್ತಿಯೂ ನನಗಿದೆ ಎಂದು ಅವರು ಹೇಳಿದ್ದಾರೆ.ಕೆಲಸ ಆಗಿರುವ ಜಾಗಗಳಿಗೆ ಹೋಗಿ ಖುದ್ದು ಪರಿಶೀಲನೆ ಮಾಡೋಣ.ಕಣ್ಣಲ್ಲಿ ಕಂಡಿದ್ದು ಮಾತ್ರವೇ ನಂಬಿಕೆಗೆ ಅರ್ಹ.ಹೀಗಾಗಿ ಕಣ್ಣಲ್ಲಿ ನೋಡಿ ನಂಬೋಣ.ರಸ್ತೆ ಮತ್ತಿತರ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕವೇ ಮಾಡುವುದಾದರೆ ಪಾಲಿಕೆಯಲ್ಲಿ ಎಂಜಿನಿಯರ್ ಗಳು ಇರುವುದರ ಔಚಿತ್ಯವಾದರೂ ಏನು?ನಿಮ್ಮ ಕೆಲಸವನ್ನು ಬೇರೆ ಯಾರೋ ಮಾಡುವುದಾದರೆ ನೀವು ಇರುವುದಾದರೂ ಏಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಇಂದು ಬಿಬಿಎಂಪಿ ಕಚೇರಿಯಲ್ಲಿ ಸಭೆ ನಡೆಸಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ. pic.twitter.com/bLdy7tG8Vm
— DK Shivakumar (@DKShivakumar) May 29, 2023
ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೊರವಲಯದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಬಾರದು.ಹಾಗೇ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ದಂಡ ಮತ್ತಿತರ ಕಾನೂನು ಕ್ರಮ ಜರುಗಿಸಬೇಕು.ಒಣ ಮತ್ತು ಹಸಿಕಸ ವೈಜ್ಞಾನಿಕ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು.ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು.ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಟಿ ಡಿ ಆರ್ ಯೋಜನೆ ಜಾರಿಗೆ ತರಬೇಕು.ರಸ್ತೆ ಮತ್ತಿತರ ಯೋಜನೆಗಳಿಗೆ ಆಸ್ತಿ ಕಳೆದುಕೊಂಡವರ ಹಿತ ಕಾಯಬೇಕು.ಯಾವುದೇ ಯೋಜನೆ ಕಾಮಗಾರಿ ಆರಂಭಕ್ಕೆ ಮುನ್ನ ಆ ಜಾಗದ ವಿಡಿಯೋ, ಫೋಟೋ ಮಾಡಿಡಿ.ನಿಜವಾಗಿಯೂ ಜನರ ಉಪಯೋಗಕ್ಕೆ ಆ ಯೋಜನೆ ಆಗುತ್ತಿದೆಯೋ ಅಥವಾ ಇನ್ಯಾರಾದರೂ ಪ್ರಭಾವಿಗಳ ಅನುಕೂಲಕ್ಕೆ ಆ ಯೋಜನೆ ಆಗುತ್ತಿದೆಯೋ ಎಂಬ ಮಾಹಿತಿ ಸಾರ್ವಜನಿಕರಿಗೆ ಸಿಗಲಿ ಎಂದು ಅವರು ಸೂಚಿಸಿದರು.
ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ, ಸರಿಪಡಿಸಿ.ಮಳೆ ನೀರು ಸಮಸ್ಯೆಯಿಂದ ನಮಗೆ ಮತ್ತು ನಿಮಗಿಂತ ಹೆಚ್ಚಾಗಿ ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ.ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು.ಬಿಬಿಎಂಪಿ ಸಮುದ್ರ ಇದ್ದಂತೆ. ಎಲ್ಲಿ ತೆಲುತ್ತೇವೆಯೋ , ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ.ರಾಜಕಾರಣಿಗಳು, ಅಧಿಕಾರಿಗಳು ಸೇರಿ ಏನೆಲ್ಲಾ ಮಾಡುತ್ತಾರೆ ಎಂಬುದು ಗೊತ್ತಿದೆ.ಬೆಂಗಳೂರು ಬರೀ ಕರ್ನಾಟಕ್ಕದ್ದಲ್ಲ, ಇಡೀ ದೇಶದ ಆಸ್ತಿ.ನಮ್ಮ ಚುನಾವಣೆ ಹೋರಾಟವೇ ಭ್ರಷ್ಟಾಚಾರ ವಿರುದ್ದದ್ದು. ಎಲ್ಲರೂ ಕೆಟ್ಟವರು ಎಂದು ಹೇಳಲ್ಲ. ಒಳ್ಳೆಯವರೂ ಇದ್ದಾರೆ.ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ, ಅವರಿಗೆ ಇವರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ.ನಾನೊಬ್ಬನೇ ಏನೊ ಮಾಡುತ್ತೇನೆ ಎಂಬ ಭ್ರಮೆ ಇಲ್ಲ.ನಾವು ನೀವು ಸೇರಿ ಕೆಲಸ ಮಾಡೋಣ ಎಂದು ಅವರು ಅಧಿಕಾರಿಗಳಿಗೆ ಬುದ್ದಿವಾದ ಹೇಳಿದರು.
ಇದನ್ನೂ ಓದಿ: ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ
ಸಮಯದ ಮಿತಿ ಇಲ್ಲದೇ ದುಡಿಯಬೇಕು.100% ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ.ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ.ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ.ಅದಕ್ಕೆ ಆಸ್ಪದ ಕೊಡಬೇಡಿ.ಒಳ್ಳೆ ಕೆಲಸ ಮಾಡಿ.ಒಳ್ಳೆ ಹೆಸರು ಪಡೆಯಿರಿ.ಸರಕಾರಕ್ಕೆ ಒಳ್ಳೆ ಹೆಸರು ತನ್ನಿ.ಹಿಂದಿನ ಸರಕಾರದ ಅವಧಿಯಲ್ಲಿ ಯಾರ್ಯಾರಿಗೋ ಬೂತ್ ಲೆವೆಲ್ ಆಫೀಸರ್ ಅಂತ ಲೆಟರ್ ಕೊಟ್ರಲ್ಲ, ನಿಮಗೆ ಬುದ್ದಿ ಇರಲಿಲ್ಲವಾ? ಯಾರ್ಯಾರು ಏನೇನೂ ಮಾಡಿದರು, ಎಷ್ಟೆಷ್ಟು ಭ್ರಷ್ಟಾಚಾರ ಮಾಡಿದರು ಅಂತ ಗೊತ್ತಿದೆ.ಈಗ ಬದಲಾವಣೆ ಮಾಡಿಕೊಳ್ಳಿ.ಈ ಸರಕಾರ ಬದಲಾವಣೆ ತಂದಿದೆ ಎಂದು ಜನರಿಗೆ ಮನವರಿಕೆ ಆಗುವಷ್ಟರ ಮಟ್ಟಿಗೆ ಉತ್ತಮವಾಗಿ ಕೆಲಸ ಮಾಡಿ.ನಿಮ್ಮ ಹಾಗೂ ಸರಕಾರದ ಗೌರವ ಉಳಿಸಿ ಎಂದು ಅವರು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ