ಚಿಕ್ಕೋಡಿ: ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡದಿದ್ದರೆ ಈ ಸರ್ಕಾರವನ್ನೇ ಬೀಳಿಸ್ತೀನಿ ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಉತ್ತರಕನ್ನಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದ ಅವರು, "ನಿಮಗೆ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು. ಒಂದು ವೇಳೆ ಮನೆ ಕಟ್ಟಿಸಿಕೊಡದಿದ್ದರೆ ಈ ಸರ್ಕಾರವನ್ನೇ ಕೆಡವಿ ಬಿಡ್ತೀನಿ" ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳಿಸುವಲ್ಲಿ ಜಾರಕಿಹೊಳಿ ಸಹೋದರರು ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ತಿಂಗಳ ಹಿಂದಷ್ಟೇ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವನ್ನೂ ಬೀಳಿಸುವ ಹೇಳಿಕೆ ನೀಡುವ ಮೂಲಕ ಪ್ರವಾಹ ಸಂತ್ರಸ್ತರ ಬೆಂಬಲಕ್ಕೆ ನಿಲ್ಲುವುದಷ್ಟೇ ಅಲ್ಲದೆ, ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.