ಬೆಂಗಳೂರು : ರಾಜ್ಯ ಬಿಜೆಪಿಯ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಮಲಪಾಳಯಕ್ಕೆ ಸವಾಲ್ ಹಾಕಿದ್ದಾರೆ.
ಟ್ಟೀಟ್ ಮೂಲಕ ಬಿಜೆಪಿ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ?. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..! ಎಂದು ಗುಡುಗಿದ್ದಾರೆ.
ಇದನ್ನೂ ಓದಿ: ಮೈ ಜುಮ್ಮೆನಿಸುವಂತಿದೆ ʼಕಾಂತಾರʼ ದಂತಕಥೆಯ ಮೆಂಕಿಂಗ್..!
ಅಲ್ಲದೆ, ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.
ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ @BJP4Karnataka? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ?
ಜನ ಬಂಡೆದಿದ್ದಾರೆ, ಎಚ್ಚರ..! 1/5#PayCM #40PercentSarkara— Siddaramaiah (@siddaramaiah) September 22, 2022
ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯವರು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ. ರಾಜ್ಯ ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ ಎಂದಿದ್ದಾರೆ.
ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಏನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.