ʼಬಿಜೆಪಿ ಬಗ್ಗೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿʼ
ರಾಜ್ಯ ಬಿಜೆಪಿಯ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಮಲಪಾಳಯಕ್ಕೆ ಸವಾಲ್ ಹಾಕಿದ್ದಾರೆ.
ಬೆಂಗಳೂರು : ರಾಜ್ಯ ಬಿಜೆಪಿಯ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಮಲಪಾಳಯಕ್ಕೆ ಸವಾಲ್ ಹಾಕಿದ್ದಾರೆ.
ಟ್ಟೀಟ್ ಮೂಲಕ ಬಿಜೆಪಿ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ?. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..! ಎಂದು ಗುಡುಗಿದ್ದಾರೆ.
ಇದನ್ನೂ ಓದಿ: ಮೈ ಜುಮ್ಮೆನಿಸುವಂತಿದೆ ʼಕಾಂತಾರʼ ದಂತಕಥೆಯ ಮೆಂಕಿಂಗ್..!
ಅಲ್ಲದೆ, ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ? ಎಂದು ಪ್ರಶ್ನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.