ಬೆಂಗಳೂರು: ನಿರಂತರವಾಗಿ ಮುನ್ನಡೆ ಕಾಯ್ದುಕೊಂಡಿರುವ ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ 'ತನ್ನ ಗೆಲುವು ಗ್ಯಾರಂಟಿ' ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಾಧ್ಯಮದವರೊಂದಿಗೆ ಮಾತನಾಡಿದ ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ತಾನು ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಆದರೂ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆ ಮಾಡಬಾರದು. ಅನಾವಶ್ಯಕ ಗದ್ದಲ-ಗೊಂದಲಗಳಿಗೆ ಎಡೆ ಮಾಡಿಕೊಡಬಾರದು ಎಂದು ಕರೆ ಕೊಟ್ಟಿದ್ದಾರೆ.


ಮಂಜುನಾಥ್ 2018ರ ಸಾರ್ವಜನಿಕ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಇವರ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಎಚ್. ವಿಶ್ವನಾಥ್ ಗೆಲುವು ಕಂಡಿದ್ದರು. ಬಳಿಕ ವಿಶ್ವನಾಥ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ವಿಶ್ವನಾಥ್ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ. ವಿಶ್ವನಾಥ್ ವಿರುದ್ಧ ಮಂಜುನಾಥ್ ಐದು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.


ಐದನೇ ಸುತ್ತಿನ ಮುಕ್ತಾಯದ ಬಳಿಕ
ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್- 21,097
ಬಿಜೆಪಿ ಅಭ್ಯರ್ಥಿ ವಿಶ್ವನಾಥ್ - 13,464
ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ - 10,311 ಮತಗಳನ್ನು ಪಡೆದಿದ್ದಾರೆ.