Rohini Sindhuri : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಐಪಿಎಸ್‌ ಅಧಿಕಾರಿ ಡಿ.ರೂಪ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ರೋಹಿಣಿಯವರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಿಂದ ಇಬ್ಬರ ನಡುವೆ ಪೋಸ್ಟ್ ವಾರ್ ಮುಂದುವರೆದಂತೆ ಕಾಣುತ್ತಿದೆ.


COMMERCIAL BREAK
SCROLL TO CONTINUE READING

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಕೆಲವುದಿನಗಳಿಂದ ತಣ್ಣಗಾಗಿದ್ದ ಪ್ರಕರಣ ಸದ್ಯ ಹೊಸ ರೂಪ ಪಡೆದುಕೊಂಡಿದೆ. 


 


ಇದನ್ನೂ ಓದಿ: Yadgiri Crime News: ವಿಷ ಸೇವಿಸಿ ಪ್ರೇಮಿಗಳಿಬ್ಬರ ಆತ್ಮಹತ್ಯೆ..!


ರೋಹಿಣಿ ಸಿಂಧೂರಿಯವರ ಕೆಲವು ಫೋಟೋಗಳನ್ನು ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ರೂಪಾ ಅವರು, ʼಈ ರೀತಿಯ ಪಿಕ್ಚರ್ಸ್ normal ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ one to one ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ private matter ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ investigate ಮಾಡಬಹುದು. ಸಲೂನ್ haircut chitra, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. Normal ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise. ಎಂದು ತಮ್ಮ ಫೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: D Roopa Vs Rohini Sindhuri: ಡಿಕೆ ರವಿ ಹೆಸರು ಉಲ್ಲೇಖಿಸಿ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪಗಳ ಸುರಿಮಳೆ


ಇನ್ನೂ ರೋಹಿಣಿ ಸಿಂಧೂರಿ ಹಾಗೂ ಸಾ. ರಾ. ಮಹೇಶ್‌ ಸಂಧಾನ ಕುರಿತು ಡಿ.ರೂಪ‌ ಅವರು ರೋಹಿಣಿ ಅವರ ಮೇಲೆ ಆರೋಪಗಳ ಸುರಿಮಳೆ ಸುರಿಸಿದ್ದಾರೆ. ರೋಹಿಣಿ ಸಿಂಧೂರಿ ಐಎಎಸ್ ಸಾ.ರಾ ಮಹೇಶ್ ಬಳಿ ಸಂಧಾನಕ್ಕೆ ಹೋಗಿದ್ದು ಯಾಕೆ.? ಎಂದು ಪ್ರಶ್ನೆ ಮಾಡಿದ್ದಾರೆ. ಡಿಕೆ ರವಿ ಮತ್ತು ರೋಹಿಣಿ ಸಿಧೂರಿಯವರ ಚ್ಯಾಟ್ಸ್ ವಿಚಾರವಾಗಿ ರೂಪ ಉಲ್ಲೇಖ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.