ಬೆಂಗಳೂರು: ಈದ್ಗಾ ಮೈದಾನದ ಭೂ ವಿವಾದದ ಬೆನ್ನಲ್ಲೆ ಪಾಲಿಕೆ ವತಿಯಿಂದ ಮುಸ್ಲೀಂ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದೆ. ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಯಾವುದೇ ಅಡ್ಡಿಯಿಲ್ಲ. ಏಕೆಂದರೆ ಸುಪ್ರೀಂ ಕೋರ್ಟ್ ನಲ್ಲಿ ನಮಾಜ್ ಗೆ ಅನುಮತಿ ಇದೆ. ಹೀಗಾಗಿ ಮುಸ್ಲಿಂ ಜನಾಂಗದ ಹಬ್ಬದ ಪ್ರಾರ್ಥನೆಗೆ ಅಡ್ಡಿಯಿಲ್ಲ‌. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಾರ್ಥನೆಗೆ ಅವಕಾಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.


COMMERCIAL BREAK
SCROLL TO CONTINUE READING

ರಸ್ತೆಬದಿಗಳಲ್ಲಿ ನಮಾಜ್ ಮಾಡುವಂತಿಲ್ಲ;


ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿಯ ರಸ್ತೆ ಬದಿಯಲ್ಲಿ ನಮಾಜ್ ಮಾಡೋದ್ರಿಂದ ಜನಸಾಮಾನ್ಯರಿಗೆ ಮುಸ್ಲಿಮರು ನಮಾಜ್ ಮಾಡಲು ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು.


ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಯುಕ್ತ ತುಷಾರ್ ಗಿರಿನಾಥ್, ಜುಲೈ 10ಕ್ಕೆ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗುವಂತೆ ಹಬ್ಬದ ಪ್ರಾರ್ಥನೆ ಮಾಡುವ ಹಾಗಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ​Job Alert: ಕೃಷಿ ವಿವಿ ತಾತ್ಕಾಲಿಕ ಹುದ್ದೆಗಳಿಗೆ ಜು.21 ರಂದು ನೇರ ಸಂದರ್ಶನ


ಹಬ್ಬದ ಪ್ರಾರ್ಥನೆಗೆ ರಸ್ತೆ ಬಂದ್ ಮಾಡುವುದು. ಟ್ರಾಫಿಕ್ ಸಿಗ್ನಲ್ ನಲ್ಲಿ ಚಾಪೆ ಹಾಸುವುದಕ್ಕೆ ಅವಕಾಶ ಇಲ್ಲ. ಪೊಲೀಸ್ ಇಲಾಖೆಯೊಂದಿಗೆ ಈ ಬಗ್ಗೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.


ಈದ್ಗಾ ಮೈದಾನದಲ್ಲಿ ಇಮ್ನುಂದೆ ಕಸ ವಿಲೇವಾರಿ ಇಲ್ಲ;


ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಸದ್ಯಕ್ಕೆ ಈ ಸ್ಥಳದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ. ಬಕ್ರೀದ್ ಹಬ್ಬದ ಹಿನ್ನೆಲೆ ಈ ಸ್ಥಳದಲ್ಲಿ ಜಾನುವಾರು ಮಾರಾಟ ಹೆಚ್ಚಾಗಿದೆ.ಇದರಿಂದ ತ್ಯಾಜ್ಯವು ಶೇಖರಣೆ ಆಗಿದ್ದು, ಸದ್ಯಕ್ಕೆ ಬಿಬಿಎಂಪಿ ತೆರವು ಮಾಡುವ ಕೆಲಸ ಮಾಡುವುದಿಲ್ಲ ಎಂದರು.


720 ಭಿಕ್ಷುಕರ ರಕ್ಷಣೆ;


ನಗರದ ಟ್ರಾಫಿಕ್ ಸಿಗ್ನಲ್ ನಲ್ಲಿ ಭಿಕ್ಷಾಟನೆ ವಿಚಾರ ಕುರಿತು ಪ್ರತಿಕ್ರಿಯಿಸಿ ಬಿಬಿಎಂಪಿಯಿಂದ ನಗರದ ಹಲವೆಡೆಯಿಂದ 720 ಜನರನ್ನು ಭಿಕ್ಷಾಟನೆಯಿಂದ ರಕ್ಷಣೆ ಮಾಡಲಾಗಿದೆ. ಹಲವು ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆ‌ ಪಾಲಿಕೆಯಿಂದ ವಿಶೇಷ ಕಾರ್ಯಾಚರಣೆ ಮಾಡಿ 720 ಜನರನ್ನು ರಕ್ಷಿಸಲಾಗಿದೆ. ನಗರದಲ್ಲಿ ಭಿಕ್ಷಾಟನೆ ಜಾಲ ಭೇದಿಸಲು ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ