ಚಳ್ಳಕೆರೆ: ಸರ್ಕಾರ ತಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲದಿದ್ದರೆ ಸಿಎಂ ಸೇರಿದಂತೆ ಎಲ್ಲ ಮಂತ್ರಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಚಳ್ಳಕೆರೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;


ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇವಲ ನಮ್ಮ ಪಕ್ಷದ ನಾಯಕರಲ್ಲ. ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಹಕ್ಕಿನಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ. ಅವರ ಯಾವುದಾದರೂ ಹೇಳಿಕೆ ಸರಿ ಇಲ್ಲ ಎನಿಸಿದ್ದಲ್ಲಿ ಅದನ್ನು ಟೀಕೆ ಮಾಡಬಹುದು. ಅದು ಪ್ರಜಾಪ್ರಭುತ್ವದ ಭಾಗ. ಆದರೆ ನೆರೆ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಸರ್ಕಾರದ ಕಣ್ಣು ತೆರೆಸಲು ಹಾನಿ ಪ್ರದೇಶಕ್ಕೆ ಭೇಟಿ ನೀಡುತ್ತಿರುವಾಗ ಈ ರೀತಿ ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಹೊಡೆದಿರುವುದು ಸರಿಯಲ್ಲ. 


ಇದನ್ನೂ ಓದಿ : ರಾಯಚೂರಿನ ಜನ ತೆಲಂಗಾಣದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿದ್ದಾರೆ: ಸಿಎಂ ಕೆ.ಚಂದ್ರಶೇಖರ್ ರಾವ್ 


ಸರ್ಕಾರ ಮಾಡಿದ ಅನೇಕ ತಪ್ಪುಗಳನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ತಮಗೆ ಅನ್ಯಾಯ ಆಗಿದೆ ಎಂದು ಪ್ರತಿಭಟಿಸಿದ್ದಾರೆ. ಇದು ಚರ್ಚೆಗೆ ಅವರು ನಮಗೆ ಕೊಟ್ಟಿರುವ ಅಸ್ತ್ರಗಳು. ರಾಜ್ಯದ ಜನ ಸಮಸ್ಯೆಗಳಿಂದ ಪರದಾಡುತ್ತಿರುವಾಗ ಸರ್ಕಾರವನ್ನು ಎಚ್ಚರಿಸುವ ಜವಾಬ್ದಾರಿ ವಿರೋಧ ಪಕ್ಷದ್ದಾಗಿದೆ. ಅದನ್ನು ಮಾಡಲು ಮುಂದಾದರೆ ಕಪ್ಪು ಬಾವುಟ ಹಾರಿಸಿ, ಮೊಟ್ಟೆ ಹೊಡೆಯುತ್ತಿದ್ದಾರೆ. ಈ ರೀತಿ ಸಿದ್ದರಾಮಯ್ಯ ಅವರನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಹೆದರಿಸಲು ಸಾಧ್ಯವೇ?


ನಾವು ಕಾಂಗ್ರೆಸ್ ಪಕ್ಷದವರು. ನಮಗೆ ಹೋರಾಟದ ಇತಿಹಾಸ ಇದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್. ವಿರೋಧ ಪಕ್ಷದ ನಾಯಕರು ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಬೊಮ್ಮಾಯಿ ಸಾಹೇಬರೆ, ಕಟೀಲ್ ಸಾಹೇಬರೇ ನಾನು ಯಾವುದೇ ಕರೆ ನೀಡದಿದ್ದರೂ ಅನೇಕ ಕಡೆಗಳಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಒಂದು ವೇಳೆ ನಾನು ಅಧಿಕೃತವಾಗಿ ಕರೆ ನೀಡಿ ಮಂತ್ರಿಗಳ ಕಾರ್ಯಕ್ರಮದ ಕಡೆಗಳಲ್ಲಿ ನಿಮ್ಮ ಲಂಚ ಹಾಗೂ 40% ಕಮಿಷನ್ ವಿರೋಧಿಸಿ ಅದೇ ಕಪ್ಪು ಬಾವುಟ ಹಿಡಿದು ಅಡ್ಡಿ ಮಾಡಲು ಹೊರಟರೆ ನಿಮ್ಮ ಕಾನೂನು ವ್ಯವಸ್ಥೆ ಏನಾಗುತ್ತದೆ ಎಂದು ಯೋಚಿಸಿದ್ದೀರಾ?


ಇದನ್ನೂ ಓದಿ : Breaking News : ಬಿಜೆಪಿ ಸಂಸದೀಯ ಮಂಡಳಿಯನ್ನು ಘೋಷಿಸಿದ ನಡ್ಡಾ : ಸಚಿವ ಗಡ್ಕರಿ ಔಟ್


ನೀವು ಈ ಹಿಂದೆ ನೈತಿಕ ಪೊಲೀಸ್ ಗಿರಿಯಲ್ಲಿ ತಪ್ಪೇನಿದೆ ಎಂದು ಹೇಳಿದ್ದಿರಿ. ಮತ್ತೊಂದು ಕಡೆ ನಾವು ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ 30-40 ಪ್ರಕರಣ ದಾಖಲಿಸಿದ್ದೀರಿ. ನಾವು ಅದಕ್ಕೆ ಹೆದರಲಿಲ್ಲ. ಸರ್ಕಾರ ಇದನ್ನು ತಡೆಯದಿದ್ದರೆ ನಮ್ಮ ನಾಯಕರ ಜತೆ ಚರ್ಚೆ ಮಾಡಿ ಮುಂದಿನ ಹೋರಾಟದ ಹೆಜ್ಜೆ ಇಡಬೇಕಾಗುತ್ತದೆ. 


ಭಾರತ್ ಜೋಡೋ ಕಾರ್ಯಕ್ರಮ ಸ್ಥಳ ಪರಿಶೀಲನೆಗೆ ಪ್ರವಾಸ


ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಸುಧಾಕರ್ ಅವರ ಅಹ್ವಾನದ ಮೇರೆಗೆ ಹಾಗೂ ರಾಹುಲ್ ಗಾಂಧಿ ಅವರ ಭಾರತ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಈ ಮಾರ್ಗದ ಹಾಗೂ ವ್ಯವಸ್ಥೆ ಕಲ್ಪಿಸಲು ಪರಿಶೀಲಿಸಲು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದೇನೆ.ಸಿದ್ದರಾಮಯ್ಯ ಅವರು ವಿರೋಧವಿದ್ದರೂ ಕೊಡಗಿಗೆ ಹೋಗಿದ್ದೇಕೆ ಎಂಬ ಪ್ರಶ್ನೆಗೆ, ‘ಅದೇನು ವಿರೋಧ ವ್ಯಕ್ತಪಡಿಸುವವರ ಮನೆಯೇ?’ ಎಂದು ಪ್ರಶ್ನಿಸಿದರು.


2010 ರಿಂದ 2018 ರವರೆಗೆ ಇಂಧನ ಇಲಾಖೆಯಲ್ಲಿ ಸಾಕಷ್ಟು ಒಳಒಪ್ಪಂದಗಳು ಆಗಿದ್ದು ತನಿಖೆ ಮಾಡುತ್ತೇವೆ ಎಂಬ ಸರ್ಕಾರದ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ತಡ ಮಾಡದೇ ತನಿಖೆ ಮಾಡಿಸಲಿ. ಕೇವಲ ಬಾಯಿ ಮಾತಿಗೆ ಹೇಳಿ ಸುಮ್ಮನಾಗಬಾರದು. ಸಿಬಿಐ, ಇಡಿ ಅಥವಾ ಅವರೇ ಮಾಡಲಿ. ಆದಷ್ಟು ಬೇಗ ತನಿಖೆ ಮಾಡಿಸಲಿ’ ಎಂದು ತಿಳಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.