ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ, ಜನವಿರೋಧಿ ಕಾಯಿದೆಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ "ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು" ಎಂಬ ಕಿರು ಹೊತ್ತಿಗೆಯನ್ನು ಇಂದು ಬಿಡುಗಡೆಗೊಳಿಸಿದೆ ಎಂದು  ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದರು.


COMMERCIAL BREAK
SCROLL TO CONTINUE READING

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ಹೋರಾಟದ ರೂಪುರೇಷೆ ಸಿದ್ಧಪಡಿಸಿ, ಜೈಲ್ ಭರೋ ಚಳವಳಿಯನ್ನೂ ಹಮ್ಮಿಕೊಳ್ಳಲಾಗುವುದು.  
ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ನಂತರ ರೈತರು ತಮ್ಮ ಬೆಳೆಗಳನ್ನು ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟ ಮಾಡಬೇಕಾದ ನಿಯಮವಿರುವುದಿಲ್ಲ,ಯಾರಿಗೆ ಬೇಕಾದರೂ ಮಾರಬಹುದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ.


ಹೆಚ್ಚು ಬೆಲೆ ಸಿಗುತ್ತದೆ ಎಂಬ ಕಾರಣಕ್ಕೆ ರೈತರು ಖಾಸಗಿಯವರಿಗೆ ಬೆಳೆಗಳನ್ನು ಮಾರುವುದರಿಂದ ಕಾಲಕ್ರಮೇಣ ಎಪಿಎಂಸಿ ಗಳ ವಹಿವಾಟು ಸ್ಥಗಿತಗೊಂಡು ಮುಚ್ಚಲ್ಪಡುತ್ತವೆ. ಮುಂದೆ ರೈತರು ಬೆಳೆಗಳ ಮಾರಾಟಕ್ಕಾಗಿ ಖಾಸಗಿಯವರನ್ನೇ ಸಂಪೂರ್ಣ ಅವಲಂಬಿಸಬೇಕಾಗುತ್ತದೆ.
ಆರಂಭದ ದಿನಗಳಲ್ಲಿ ರೈತರಿಗೆ ಲಾಭದಾಯಕವಾದರೂ ನಂತರದ ದಿನಗಳಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಸಿಗುವ ಖಾತ್ರಿಯಿಲ್ಲ.


Nirmala Sitharaman) ಅವರು “ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಮುಚ್ಚಲು ಇದು ಸಕಾಲ”ಎಂದಿದ್ದರು.


ರೈತರ ಬೆಳೆಗಳಿಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆ ಪದ್ಧತಿಯನ್ನು ನಿಲ್ಲಿಸಲ್ಲ ಎಂದು ಸರ್ಕಾರ ಕೇವಲ ಬಾಯಿಮಾತಲ್ಲಷ್ಟೇ ಹೇಳಿದೆ, ಇದನ್ನು ಕಾನೂನಿನ ಮೂಲಕ ದೃಢಪಡಿಸಿ ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದರೆ ಅದನ್ನು ಒಪ್ಪಲು ಬಿಜೆಪಿ ಸರ್ಕಾರ ಸಿದ್ಧವಿಲ್ಲ. 


ಭೂಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ತಪ್ಪು ಮಾಹಿತಿ ನೀಡಿ, ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ. ಕಾಯ್ದೆ ಜಾರಿಯಿಂದ ಯಾರು ಬೇಕಾದರೂ ಕೃಷಿ ಮಾಡಬಹುದು, ನಿರುದ್ಯೋಗಿ ಯುವಕ ಯುವತಿಯರಿಗೆ ಕೃಷಿ ಮಾಡಲು ಈ ತಿದ್ದುಪಡಿ ಅವಕಾಶ ನೀಡುತ್ತೆ ಎಂಬುದು ಸರ್ಕಾರದ ವಾದ. 
ಸರ್ಕಾರ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು 79(ಎ). (ಬಿ), (ಸಿ) ನಿಯಮಗಳನ್ನು ರದ್ದುಮಾಡಿ ಯಾರು ಬೇಕಾದರೂ ಭೂಮಿಯನ್ನು ಖರೀದಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ಭೂಮಿ ಖರೀದಿಸುವ ಬಂಡವಾಳಶಾಹಿಗಳು ಕೃಷಿಯೇತರ ಕಾರ್ಯಗಳಿಗೆ ಭೂಮಿಯನ್ನು ಬಳಕೆ ಮಾಡುತ್ತಾರೆ. ಇದನ್ನು ನಿರ್ಬಂಧಿಸುವ ಯಾವ ನಿಯಮಗಳು ತಿದ್ದುಪಡಿಯಲ್ಲಿ ಇಲ್ಲ.


ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದರೆ ಸಿದ್ದರಾಮಯ್ಯ (Siddaramaiah) ಅವರು ಭೂಮಿ ಖರೀದಿಗೆ ಇದ್ದ ಕೃಷಿಯೇತರ ಆದಾಯದ ಮಿತಿಯನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಿದ್ದಾರೆ ಅಂತಾರೆ. ನಮ್ಮ ಸರ್ಕಾರ ಕೃಷಿಯಲ್ಲಿ ತೊಡಗಿಕೊಂಡಿರುವ ರೈತರ ಕೃಷಿಯೇತರ ಆದಾಯ ಮಿತಿಯನ್ನು ಮಾತ್ರ ಏರಿಕೆ ಮಾಡಿತ್ತೇ ಹೊರತು, ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ.


BJP) ನಾಯಕರು ಗೋವನ್ನು ತಾಯಿಯಂತೆ ಕಾಣುವುದೇ ಆದರೆ ಮೊದಲು ಗೋಮಾಂಸ ರಫ್ತನ್ನು ನಿಲ್ಲಿಸಲಿ. ಭಾರತದಲ್ಲಿ ತಿಂದರಷ್ಟೇ ಗೋವು ಮಾತೆಯೇ? ವಿದೇಶಗಳಿಗೆ ರಫ್ತಾಗುತ್ತಿರುವ ಗೋವುಗಳು ಮಾತೆಯಲ್ಲವೇ?ವಿದೇಶಗಳಿಂದ ಗೋಮಾಂಸವನ್ನು ಆಮದು ಮಾಡುವವರು ಬಿಜೆಪಿಯವರು, ವಿದೇಶಗಳಿಗೆ ರಫ್ತು ಮಾಡುತ್ತಿರುವವರು ಬಿಜೆಪಿಯವರು, ಆದರೆ ರಾಜಕೀಯ ಲಾಭಕ್ಕಾಗಿ ಒಂದು ಸಮುದಾಯವನ್ನು ಮಾತ್ರ ಗೋಹತ್ಯೆ ಮಾಡುವವರು ಎಂಬುದಾಗಿ ಬಿಂಬಿಸಲಾಗುತ್ತಿದೆ.


ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಒಂದಕ್ಕೆ 110 ಡಾಲರ್ ಇದ್ದಾಗ ಪೆಟ್ರೋಲ್ ಅನ್ನು 60-65 ರೂಪಾಯಿಗೆ ಸರ್ಕಾರ ಮಾರಾಟ ಮಾಡಿತ್ತು. ಪ್ರಸ್ತುತ ಕಚ್ಚಾತೈಲ ಬೆಲೆ ಬ್ಯಾರಲ್ ಗೆ 42 ಡಾಲರ್ ಇದೆ, ಅಂದರೆ ಈಗ ಮಾರುತ್ತಿರುವ ಅರ್ಧಬೆಲೆಗೆ ಪೆಟ್ರೋಲ್, ಡೀಸೆಲ್‌ ಅನ್ನು ಮಾರಾಟ ಮಾಡಬೇಕು.