ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಾಮಾಣಿಕರಾಗಿದ್ದರೆ ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾ ಮಾಡಲಿ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಯುದ್ಧ ನಡೆಯುತ್ತಿದೆ: ಬಿಜೆಪಿ ಟೀಕೆ


Congress Government)ದ ಅವದಿಯಲ್ಲಿ ನಡೆದಿರುವ ಟೆಂಡರ್ ಗಳೂ ಸೇರಿ ಈವರೆಗಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ. ಉಪ್ಪು ತಿಂದವರು ನೀರು ಕುಡೀತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಶೇ.40 ರಷ್ಟು ಕಮಿಷನ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದಾರೆ. ಆದರೆ ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಸತ್ಯ ಹೊರಬರುತ್ತದಾ?’ ಅಂತಾ ಕಿಡಿಕಾರಿದ್ದಾರೆ.


ರೈತರ ಸರ್ಕಾರ ಎಂದು ಹೇಳಿ ಬಿಜೆಪಿ ರೈತರಿಗೆ ಟೋಪಿ ಹಾಕುವ ಕೆಲಸ ಮಾಡಬಾರದು"-ಸಿದ್ಧರಾಮಯ್ಯ


Karnataka MLC Election)ಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ. ಆದರೆ ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ - ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.