ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆಗೆ ಕೂಡಲೇ ಪರಿಹಾರ - ಅಮಿತ್ ಷಾ

ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭುಗಿಲೆದ್ದಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದವನ್ನು ಬಗೆಹರಿಸಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.   

Last Updated : Feb 26, 2018, 01:37 PM IST
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆಗೆ ಕೂಡಲೇ ಪರಿಹಾರ - ಅಮಿತ್ ಷಾ title=

ಕಲ್ಬುರ್ಗಿ : ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭುಗಿಲೆದ್ದಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದವನ್ನು ಬಗೆಹರಿಸಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. 

3 ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಷಾ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, 
ಮಹದಾಯಿ ಸಮಸ್ಯೆಯನ್ನು ಬಗೆಹರಿಸುವ ಇಚ್ಛೆ ಸಿದ್ದರಾಮಯ್ಯರ ಸರ್ಕಾರಕ್ಕೆ ಇರಲಿಲ್ಲ. ಹಾಗಾಗಿ ಎಂದಿಗೂ ಸಕ್ರಿವಾಗಿ ಕೆಲಸ ಮಾಡಲಿಲ್ಲ. ನಮ್ಮ ಸರ್ಕಾರ ಕರ್ನಾಟಕದಲ್ಲಿ ಬಂದ ಕೂಡಲೇ ನಾವು ಇದಕ್ಕೆ ಪರಿಹಾರ ನೀಡುತ್ತೇವೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಅಭಿವೃದ್ಧಿಯೇ ಇರಲಿ, ಕಾನೂನು ಸುವ್ಯವಸ್ಥೆಯೇ ಇರಲಿ, ಸಿದ್ದರಾಮಯ್ಯ ಸರ್ಕಾರ ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿದೆ. ಕಾಂಗ್ರೆಸ್ಸಿನ ದುರಾಡಳಿತ ಹೇಗಿರುತ್ತದೆ ಎಂದು ನೋಡಬೇಕಾದರೆ, ಸಂಸದ ಮಲ್ಲಿಕಾರ್ಜುನ್ ಖರ್ಗೆಯವರ ಕ್ಷೇತ್ರಕ್ಕೆ ಭೇಟಿ ನೀಡಿದರೆ ತಿಳಿಯುತ್ತದೆ. ದಿಗೂ ಕೂಡ ಹೈದರಾಬಾದ್-ಕರ್ನಾಟಕ ಅತ್ಯಂತ ಹಿಂದುಳಿದ ಕ್ಷೇತ್ರವಾಗಿದೆ. ಖರ್ಗೆಯಾವರೀ ಇದಕ್ಕೆ ನೇರ ಹೊಣೆ ಎಂದು ಆರೋಪಿಸಿದರು. 

Trending News