`ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ`
ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ಸ್ಮರಿಸಿದ್ದಾರೆ.
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ಸ್ಮರಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ.ಅರಿವಿನ ಗುರುವಿಗೆ ಗೌರವದ ನಮನಗಳು..ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರ್ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ.ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.