ಅಧಿವೇಶನದೊಳಗಾಗಿ ಗ್ಯಾರಂಟಿ ಜಾರಿ ಮಾಡದಿದ್ದರೆ ಸದನದ ಒಳಗೆ ಹೊರಗೆ ಧರಣಿ-ಬಿಎಸ್ವೈ ಎಚ್ಚರಿಕೆ
ಅಧಿವೇಶನದೊಳಗಾಗಿ ಗ್ಯಾರಂಟಿ ಜಾರಿ ಮಾಡದಿದ್ದರೆ ಸದನದ ಒಳಗೆ ಹೊರಗೆ ಧರಣಿ ಸತ್ಯಾಗ್ರಹ ಕೂರುವುದಾಗಿ ಮಾಜಿ ಸಿಎಂ ಬಿಎಸ್ವೈ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ : ಅಧಿವೇಶನದೊಳಗಾಗಿ ಗ್ಯಾರಂಟಿ ಜಾರಿ ಮಾಡದಿದ್ದರೆ ಸದನದ ಒಳಗೆ ಹೊರಗೆ ಧರಣಿ ಸತ್ಯಾಗ್ರಹ ಕೂರುವುದಾಗಿ ಮಾಜಿ ಸಿಎಂ ಬಿಎಸ್ವೈ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ- 30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರು ಆದ್ರೆ ನೀವೇ ಜವಾಬ್ದಾರಿ!
ದಾವಣಗೇರಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರಕ್ಕೆ ಐದು ಯೋಜನೆ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ.ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡ್ತಿದೆ.ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ರಾ..!? ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ- 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
ಕೇಂದ್ರ ಸರ್ಕಾರ ಈಗಾಲೇ 5 ಕೆಜಿ ಅಕ್ಕಿ ಕೊಡ್ತಿದೆ,ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಅದುಬಿಟ್ಟು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಸರಿಯಲ್ಲ.10 ಕೆಜಿ ಅಕ್ಕಿ ಕೊಡದಿದ್ದರೆ ಮುಂಬರುವ ವಿಧಾನ ಮಂಡಲ ಅಧಿವೇಶನದ ಹೊರಗೆ ಒಳಗೆ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಹೇಳಿದರು.
ಇವತ್ತು ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕಾ ಉದ್ಯಮಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ನವರೇ ಹೇಳಬೇಕು ಎಂದು ಅವರು ಆಗ್ರಹಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ