ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ-ಎಚ್ಡಿಕೆ
ಬೆಳಗಾವಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಳಗಾವಿಯ ರೈತ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಮಾತನಾಡಿದ ಎಚ್ಡಿಕೆ,"ನಾನು ನಿಮ್ಮನ್ನು ಸಂಪೂರ್ಣ ಸಾಲ ಮುಕ್ತರನ್ನಾಗಿ ಮಾಡುವ ದಿಟ್ಟ ಸವಾಲನ್ನು ನಾನು ತೆಗೆದುಕೊಂಡಿದ್ದೇನೆ. ಅದು ನೆರವೆರಬೇಕಾದರೆ ಜೆಡಿಎಸ್ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಬೇಕು". ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿನ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ತಿಳಿಸಿದರು.
ವಿಪಕ್ಷಗಳ ಜೊತೆ ಕೈಗೂಡಿಸಿ ಅಧಿಕಾರಕ್ಕೆ ಬಂದಿದ್ದೇ ಆದರೆ ಸಂಪೂರ್ಣ ಸಾಲ ಮನ್ನಾ ಮಾಡಲು ತೊಡಕುಂಟಾಗಬಹುದು. ಆದ್ದರಿಂದ ಜೆಡಿಎಸ್ ಗೆ ಬೆಂಬಲ ನೀಡಬೇಕೆಂದು ಇದೇ ವೇಳೆ ಮನವಿ ಮಾಡಿದರು.