ಹುಬ್ಬಳ್ಳಿ: ಜಗತ್ತು ನಿಧಾನಗತಿಯಲ್ಲಿ ಸಾಗುತ್ತಿದ್ದು, ನಮ್ಮ ಭಾರತವೊಂದೇ 1000 ವಿಮಾನಗಳ ಆರ್ಡರ್ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೆಮ್ಮೆಯಿಂದ ಹೇಳಿದರು.


COMMERCIAL BREAK
SCROLL TO CONTINUE READING

ಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.


ಇದನ್ನೂ ಓದಿ: ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟು ಮಗು, ದರ್ಗಾದಲ್ಲಿ ಎಚ್ಚರ!  


ದೇಶದಲ್ಲಿ ವಿಮಾನ ನಿಲ್ದಾಣಗಳನ್ನು ಹೆಚ್ಚಿಸಲಾಗಿದೆ. ಅಂತೆಯೇ ಭಾರತೀಯರಿಗೆ ಹೆಚ್ಚಿನ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ ಎಂದು ಹೇಳಿದರು.


ನಾಡಿನ ಏಳಿಗೆಗೆ ಬಿಜೆಪಿ ನಾಯಕತ್ವ ಅಗತ್ಯ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಇಂದು ಅತ್ಯಂತ ಪ್ರಬಲ ರಾಷ್ಟ್ರವಾಗಿ ಹೊರ ಹೊಮ್ಮುತ್ತಿದೆ. ನಾಡಿನ ಏಳಿಗೆಗೆ ಬಿಜೆಪಿ ನಾಯಕತ್ವ ಅಗತ್ಯವಾಗಿದೆ ಎಂದು ಹೇಳಿದರು.


ಕಾಂಗ್ರೆಸ್ ಆಡಳಿತದ 60 ವರ್ಷಗಳಲ್ಲಿ ಭ್ರಷ್ಟ ರಾಜಕಾರಣದಿಂದಾಗಿ ಭಾರತ ಜಗತ್ತಿನ 5 ಅತ್ಯಂತ ದುರ್ಬಲ ರಾಷ್ಟ್ರಗಳಲ್ಲಿ ಒಂದಾಗಿತ್ತು. ಆದರೆ, 2014ರಲ್ಲಿ ಮೋದಿ ಪ್ರಧಾನಿಯಾದ ಬಳಿಕ ಈಗ 2024ರ ಹೊತ್ತಿಗೆ ಭಾರತವನ್ನು ಜಗತ್ತಿನ 5ನೇ ಅತ್ಯಂತ ಆರ್ಥಿಕ ಪ್ರಬಲ ರಾಷ್ಟ್ರವನ್ನಾಗಿಸಿದ್ದಾರೆ ಎಂದು ಜೋಶಿ ಹೇಳಿದರು.


ಕಾಂಗ್ರೆಸ್ ಆಡಳಿತದಲ್ಲಿ ಅಮೇರಿಕಾ, ಇಂಗ್ಲೆಂಡ್ ಹೇಳಿದ್ದಕ್ಕೆಲ್ಲಾ ತಲೆಯಾಡಿಸುವ ಕೋಲೆಬಸವನಂತಾಗಿತ್ತು ಭಾರತ. ಈ ಪರಿಸ್ಥಿತಿ  ಸಂಪೂರ್ಣ ಬದಲಾಗಿದೆ. ಇಡೀ ಜಗತ್ತೇ ಭಾರತವನ್ನು ಗೌರವಿಸುವಂತೆ ಮಾರ್ಪಾಡು ಮಾಡಿದ್ದಾರೆ ಪ್ರಧಾನಿ ಮೋದಿ ಎಂದು ಬಣ್ಣಿಸಿದರು.


ಕಳೆದು ಹೋಗುತ್ತಿದೆ ಕಾಂಗ್ರೆಸ್: ದೇಶದಾದ್ಯಂತ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಕಳೆದು ಹೋಗುತ್ತಿದೆ. ತನ್ನ ಸ್ಥಾನಗಳನ್ನೆಲ್ಲ ಕಳೆದುಕೊಳ್ಳುತ್ತಿದೆ. ಅಧಿಕೃತ ವಿರೋಧ ಪಕ್ಷವಾಗುವತ್ತ ವಾಲುತ್ತಿದೆ ಎಂದು ಜೋಶಿ ಹೇಳಿದರು.


ಅಪರಾಧ ಮಿತಿ ಮೀರಿದೆ: ಕಾಂಗ್ರೆಸ್ ಆಡಳಿತದ ಎಲ್ಲ ರಾಜ್ಯಗಳಲ್ಲಿ ಅಪರಾಧಗಳ ಸಂಖ್ಯೆ ಮಿತಿ ಮೀರಿದೆ. ಕರ್ನಾಟಕದಲ್ಲೇ ಕಳೆದ ಕೆಲ ತಿಂಗಳಲ್ಲಿ 400ಕ್ಕೂ ಹೆಚ್ಚು ಪ್ರಕರಣಗಳು ಘಟಿಸಿವೆ ಎಂದು ಸಚಿವ ಜೋಶಿ ಕಳವಳ ವ್ಯಕ್ತಪಡಿಸಿದರು.


ಇದನ್ನೂ ಓದಿ: ಅಕಾಲಿಕವಾಗಿ ಬಿಳಿಯಾದ ಕೂದಲನ್ನು ಕಡುಕಪ್ಪಾಗಿಸುತ್ತೆ ವೀಳ್ಯದೆಲೆ: ಈ ಎಣ್ಣೆಯ ಜೊತೆ ಬೆರೆಸಿ ಹಚ್ಚಿದರೆ ಸಾಕು!


ಕಾಂಗ್ರೆಸ್ ಪಕ್ಷವನ್ನು ಜನರೇ ಧಿಕ್ಕರಿಸುತ್ತಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ  ಪದವೀಧರರು ಎಚ್ಚೆತ್ತುಕೊಂಡು ಮತ ಚಲಾಯಿಸಬೇಕು. ಸುಭದ್ರ ದೇಶಕ್ಕಾಗಿ ತಮ್ಮ ಆಯ್ಕೆ ಬಿಜೆಪಿ ಆಗಿರಬೇಕು ಎಂದು ಶಿ ಕರೆ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.