ಮೈಸೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು. 


COMMERCIAL BREAK
SCROLL TO CONTINUE READING

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.


ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು. 


ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.


ಇದನ್ನೂ ಓದಿ-ಕೋಟೆಯ ನಾಡು ಚಿತ್ರದುರ್ಗದಲ್ಲಿ ʻಚಂದ್ರೋʼದಯವೋ..?


ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ: ಸಿ.ಎಂ.ಎಚ್ಚರಿಕೆ 
ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲಿ ಬಳಸಿಕೊಳ್ಳುತ್ತಾರೆ ಆದರೆ RSS ನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ RSS ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು. 


ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು ಇವರೇ ತಾನೇ? 
ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ BJP-RSS ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು. 


ಡಾ.ಬಾಬಾ ಸಾಹೇಬ್ ಅಂಬೇಡ್ಕರ್  ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು. 


ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ
ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದರು.


ಇದನ್ನೂ ಓದಿ-"ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ"-ಸಿ.ಎಂ.ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.