`ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ`-ಪ್ರಿಯಾಂಕ್ ಖರ್ಗೆ
ಇಂದು ದೇಶದ ಪ್ರಜಾಪ್ರಭುತ್ವ ಎದುರಿಸುತ್ತಿರುವ ಎಲ್ಲ ಸವಾಲುಗಳಿಗೆ ಬಾಬಾ ಸಾಹೇಬರು ರಚಿಸಿದ ನಮ್ಮ ಸಂವಿಧಾನದಲ್ಲಿ ಪರಿಹಾರವಿದೆ. ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ಅವರು ಹಾಕಿಕೊಟ್ಟ ಮಾರ್ಗ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತಲೇ ಇರಲಿವೆ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರು: ಇಂದು ದೇಶದ ಪ್ರಜಾಪ್ರಭುತ್ವ ಎದುರಿಸುತ್ತಿರುವ ಎಲ್ಲ ಸವಾಲುಗಳಿಗೆ ಬಾಬಾ ಸಾಹೇಬರು ರಚಿಸಿದ ನಮ್ಮ ಸಂವಿಧಾನದಲ್ಲಿ ಪರಿಹಾರವಿದೆ. ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ಅವರು ಹಾಕಿಕೊಟ್ಟ ಮಾರ್ಗ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತಲೇ ಇರಲಿವೆ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದ ಬಡರೋಗಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ಅವರು ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿರುವ "ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ'' ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ: ಲೋಕ ಲೆಕ್ಕಾಚಾರ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೇಗಿದೆ ರಾಜಕೀಯ ಸ್ಥಿತಿಗತಿ?
ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಮ್ಮಿಕೊಂಡಿದ್ದ "ಸಂವಿಧಾನ ಜಾಗೃತಿ ಜಾಥಾವು" ಒಂದು ತಿಂಗಳುಗಳ ಕಾಲ ರಾಜ್ಯಾದ್ಯಂತ ಸಂಚರಿಸಿ 5,400ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಿ, ಸಮಾಜದ ಎಲ್ಲಾ ವರ್ಗದ ಜನರು ಈ ಜಾಥಾದಲ್ಲಿ ಪಾಲ್ಗೊಳ್ಳುವಂತೆ ಮಾಡಿದೆ. ಈ ಮೂಲಕ ಸಂವಿಧಾನದ ಮಹತ್ವವನ್ನು ನಾಡಿನ ಜನತೆಗೆ ತಿಳಿಸುವಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿದೆ.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶದ ಮಹಿಳೆಯರು, ಕಾರ್ಮಿಕರು, ಶೋಷಿತ ಹಾಗೂ ದುರ್ಬಲ ವರ್ಗಗಳಿಗೆ, ಬಹುಜನರಿಗೆ ಸಂವಿಧಾನದ ಮೂಲಕ ಹೊಸ ಚೈತನ್ಯ, ಭರವಸೆ ನೀಡಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತೆ ಮಾಡಿದ್ದಾರೆ. ಶೋಷಿತ ಸಮುದಾಯಗಳ ಧ್ವನಿಯಾಗಿ ಸರ್ವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಸಮ ಸಮಾಜ ನಿರ್ಮಾಣಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.