ಬೆಂಗಳೂರು: 'ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇನ್ನೊಮ್ಮೆ ಕರ್ನಾಟಕಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಜೈ ಶ್ರೀರಾಮ್' ಎನ್ನುತ್ತಾರೆ' ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಅಣಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಖಂಡಿಸಿ, ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಲೇವಡಿ ಮಾಡಿದರು.


ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಅವರು ಜನರನ್ನು ಮೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಗಳೂರಿಗೆ ಬರುವ ಹಿಂದಿನ ದಿನ ಸಿದ್ದರಾಮಯ್ಯ `ಹಿಂದುತ್ವ'ದ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಆದಿತ್ಯನಾಥ್ ರ ಎರಡನೇ ಭೇಟಿಯಲ್ಲಿ ಸಿದ್ದರಾಮಯ್ಯ ತಮ್ಮ ಹೆಸರಿನಲ್ಲಿ `ರಾಮ ಮತ್ತು ಸಿದ್ದ ಎರಡೂ ಇದೆ' ಎನ್ನುತ್ತಾರೆ. ಇನ್ನೂ, ಮತ್ತೊಮ್ಮೆ ಏನಾದರೂ ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ ಸಿದ್ದರಾಮಯ್ಯ ಖಂಡಿತಾ `ಜೈ ಶ್ರೀರಾಮ್' ಎನ್ನುತಾರೆ ಎಂದು ಲಿಂಬಾವಳಿ ವ್ಯಂಗ್ಯ ಮಾಡಿದರು. 



ಕರ್ನಾಟಕ ಬಿಜೆಪಿ ನಡೆಸುತ್ತಿರುವ ಪರಿವರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಜ.7 ರಂದು ಬೆಂಗಳೂರಿಗೆ ಆಗಮಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಬಿಜೆಪಿ ಪರ ಪ್ರಚಾರನಡೆಸಿದ್ದರಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.