ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ. ಸೋಮಣ್ಣ " ರಾಜಕಾರಣದಲ್ಲಿ ಇವೆಲ್ಲ ಇರುತ್ತೆ ಏನು ಹೇಳಬೇಕು, ಎಲ್ಲಿ ಹೇಳಬೇಕು ಹೇಳಿದ್ದೀನಿ. ಕವಲುದಾರಿಗಳು ಇರುತ್ತವೆ, ನಾನೇನೂ ಸನ್ಯಾಸಿ ಇಲ್ಲ. ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ ನಾನು ಯಾವತ್ತಾದ್ರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ..!? ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು ನಾವು ಒಟ್ಟಿಗೆ ಕೆಲಸ ಮಾಡಿದ್ದೀವಿ ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೀನಿ ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ನನ್ನನ್ನು ಬೆಂಗಳೂರಿಗೆ ಮಾತ್ರ ಏಕೆ ಸೀಮಿತ ಮಾಡುತ್ತೀರಾ, ನನಗೆ ಕೊಟ್ಟ ಜವಾಬ್ದಾರಿಗಳನ್ನು ನಾನು ನಿರ್ವಹಿಸಿದ್ದೇನೆ.
ಇದನ್ನೂ ಓದಿ-“ಮುಸಲ್ಮಾನರು ಗಲಾಟೆ ಮಾಡೋರಲ್ಲ; ಹಿಂದೂಗಳಲ್ಲಿಯೂ ತಲೆಹರಟೆಗಳಿದ್ದಾರೆ”
ಉಪಚುನಾವಣೆಗಳ ಜವಾಬ್ದಾರಿ, ತುಮಕೂರು ಲೋಕಸಭೆಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇನೆ ನಾನು ಮೊದಲು ಕಾಂಗ್ರೆಸ್ ನಲ್ಲೇ ಇದ್ದೆ, ಜನತಾಪಾರ್ಟಿ, ಜನತಾದಳದಲ್ಲೂ ಕೆಲಸ ಮಾಡಿದ್ದೇನೆ. ರಾಜಕೀಯದಲ್ಲಿ ಈ ರೀತಿ ಆಗುತ್ತಿರುತ್ತೆ. ಅಭಿಮಾನಿಗಳು ಸಭೆ ಮಾಡಿದ್ರೆ ನಾನು ಮಾಡಬೇಡ್ರಿ ಅಂತ ಹೇಳೋಕೆ ಆಗುತ್ತಾ. ನಾನು ಯಾವತ್ತೂ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ, ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನಮಗೂ ಬೇಡ. ಅವಕಾಶ, ಹಣೆಬರಹ ಇದ್ದರೆ ಮಗನಿಗೆ ಟಿಕೆಟ್ ಸಿಗುತ್ತದೆ.
ನನಗೆ ಅಸಮಾಧಾನ ಇದೆ ಅಂತ ಎಲ್ಲಾದ್ರೂ ಹೇಳಿದ್ದೀನಾ..? ರಾಜಕಾರಣಿಗಳಿಗೆ ಬದ್ದತೆ ಇರಬೇಕು. ಕಾಂಗ್ರೆಸ್ ಗೆ ಬರ್ತಾರೆ ಅಂತ ಅವರ ಭಾವನೆಗಳಿವೆ, ಅದಕ್ಕ ನಾನು ಬೇಡ ಅನ್ನಲಾ..? ಅವರಿಗೆ ಒಳ್ಳಯದಾಗಲಿ " ಎಂದು ಹೇಳಿದ್ದಾರೆ.
ಇದನ್ನೂ ಓದಿ-Mandya: ನೆಚ್ಚಿನ ನಾಯಕನಿಗೆ ಹಾರ ಹಾಕುವ ಬರದಲ್ಲಿ ಅಭಿಮಾನಿಗಳಿಂದ ಎಡವಟ್ಟು!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.