"ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವುದನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ"

ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Written by - Manjunath N | Last Updated : Jul 2, 2023, 11:57 PM IST
  • ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ
  • ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ
  • ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು
"ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವುದನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ" title=

ಬೆಂಗಳೂರು: ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ|| ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ "ನೀನಲ್ಲದೆ ಮತ್ತಾರೂ ಇಲ್ಲವಯ್ಯಾ" ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. 

ಇದನ್ನೂ ಓದಿ: ರೇಣುಕಾಚಾರ್ಯ-ಯಡಿಯೂರಪ್ಪ ಸುದೀರ್ಘ ಮಾತುಕತೆ: ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ

ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ. ಬಸವಣ್ಣನವರು ಕನಸು ಕಂಡಿದ್ದ ಸಮಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ಎಲ್ಲಾ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನ‌ಮಾನ ಕಲ್ಪಿಸುವ ಆಶಯ ಆಗಿನ ಪಾರ್ಲಿಮೆಂಟ್ ಆಗಿದ್ದ ಅನುಭವ ಮಂಟಪಕ್ಕೆ ಇತ್ತು. ಇದೇ ಆಶಯ ನಮ್ಮ ಸರ್ಕಾರದ್ದೂ ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರೇ 10 ಕೆಜಿ ಅಕ್ಕಿ ಎಲ್ಲಿ: ಬಿಜೆಪಿ ಪ್ರಶ್ನೆ

ಪಂಡಿತಾರಾಧ್ಯ ಶ್ರೀಗಳ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ಶ್ರೀನಿವಾಸ್, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯ, ಶ್ಯಾಮನೂರು ಶಿವಶಂಕರಪ್ಪ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News