ಬೆಂಗಳೂರು: ನಾಳೆ ಜುಲೈ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ನಾಗನಾಯಕನಹಳ್ಳಿಯ ಏರೋಟೆಕ್ ಪಾರ್ಕ್ ಗೆ ಭೇಟಿ ನೀಡಲಿದ್ದಾರೆ.
ಇದೇ ವೇಳೆ KIADBಯ ಮೊದಲ ಹಂತದ ಜಾಗದಲ್ಲಿ IFFCO ನ್ಯಾನೊ ಯೂರಿಯಾ ಸ್ಥಾವರಕ್ಕೆ ಅಡಿಗಲ್ಲು ಹಾಕಲಿದ್ದಾರೆ.Indian Farmer's Fertilizers Limited ನ ಈ ಸ್ಥಾವರದ ಮೂಲಕ ಯೂರಿಯಾ ಗೊಬ್ಬರ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಗುವುದು. ಇದರ ಕಾಮಗಾರಿ ಚಾಲನೆಗೆ ಹಾಗೂ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ಸಹ ನಡೆಸಲಿದ್ದಾರೆ.
ಇದನ್ನೂ ಓದಿ : Today Vegetable Price: ಇಂದು ತರಕಾರಿ ಹಾಗೂ ಹಣ್ಣಿನ ಬೆಲೆ ಹೀಗಿದೆ ನೋಡಿ..
ಸಿಎಂ ಆಗಮನ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಕೋನಾವಂಶೀಕೃಷ್ಣ ಖುದ್ದು ಭೇಟಿ ನೀಡಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ