ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದವರ ಬಂಧನ!

Gas re-filling: ಕಾನೂನು ಬಾಹಿರವಾಗಿ ಸರ್ಕಾರದ ಅನುಮತಿ ಪರವಾನಗಿ ಇಲ್ಲದೇ ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಾವಣಗೆರೆಯ ಆರ್ ಎಂ ಸಿ ಯಾರ್ಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Written by - Savita M B | Last Updated : Dec 7, 2023, 09:14 AM IST
  • ಪರವಾನಗಿ ಇಲ್ಲದೇ ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
  • ಬಂಧಿತರಿಂದ ಹೆಚ್ ಪಿ ಕಂಪೆನಿ ಹೆಸರಿನ 26 ತುಂಬಿದ ಸಿಲಿಂಡರ್ ಗಳು
  • ಒಂದು ಗೊಡ್ಸ್ ಆಪೆ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದವರ ಬಂಧನ!  title=

Viral News: ದಾವಣಗೆರೆಯ ಭಾರತ್ ಕಾಲೋನಿ ನಿವಾಸಿ ಆಟೋ ಚಾಲಕ ಮಲ್ಲೇಶಪ್ಪ (50), ಬಾಷಾ ನಗರದ ಹೆಚ್ ಪಿ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸುಹೆಲ್ ರಜಾ (20) ಬಂಧಿತ ಆರೋಪಿಗಳು. 

ಇದನ್ನೂ ಓದಿ-ಕ್ರಿಕೆಟ್ ಬೆಟ್ಟಿಂಗ್: ಹುಬ್ಬಳ್ಳಿಯಲ್ಲಿ 44 ಮಂದಿಯ ಬಂಧನ!

ಬಂಧಿತರಿಂದ ಹೆಚ್ ಪಿ ಕಂಪೆನಿ ಹೆಸರಿನ 26 ತುಂಬಿದ ಸಿಲಿಂಡರ್ ಗಳು, 12 ಹೆಚ್ ಪಿ ಹೆಸರಿನ ಖಾಲಿ ಸಿಲಿಂಡರ್ ಗಳು, 3 ಸಣ್ಣ ಖಾಲಿ ಸಿಲಿಂಡರ್ ಗಳು, ಗ್ಯಾಸ್ ರೀಪಿಲ್ಲಿಂಗ್ ಕಡ್ಡಿ, ಗ್ಯಾಸ್ ರಿಫಿಲ್ಲಿಂಗ್ ಯಂತ್ರ ಸೇರಿದಂತೆ ಇತರೆ ತೂಕದ ಯಂತ್ರಗಳು ಹಾಗೂ ಒಂದು ಗೊಡ್ಸ್ ಆಪೆ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ-ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್!

ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಾ ನಗರಕ್ಕೆ ಹೋಗುವ ರಸ್ತೆಯ ಪಕ್ಕದ ಪಾಳು ಬಿದ್ದಿರುವ ಕೆ. ಎಂ ಸಿ ಕಾಂಪೌಂಡ್ ಒಳಗಿನ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಸರ್ಕಾರದ ಅನುಮತಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್ ರೀ ಪಿಲ್ಲಿಂಗ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಡಿಸಿ ಆರ್ ಬಿ ಘಟಕದ ಪೊಲೀಸ್ ನಿರೀಕ್ಷಕ ರುದ್ರಪ್ಪ ಎಲ್. ವಿದ್ಯಾನಗರ ಪೊಲೀಸ್ ಠಾಣೆ ನಿರೀಕ್ಷಕಿ ಪ್ರಭಾವತಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗ ರಾಘವೇಂದ್ರ, ಮಜೀದ್, ಅಶೋಕ್, ಬಾಲಾಜಿ, ನಟರಾಜ್, ಆಂಜನೇಯ, ಮಾರುತಿ ರವರನ್ನು ಒಳಗೊಂಡ ತಂಡ ಸ್ಥಳಕ್ಕೆ ದಾಳಿ ಮಾಡಿದ್ದು, ಕಾನೂನು ಬಾಹಿರವಾಗಿ ಗ್ಯಾಸ್ ರಿಪಿಲ್ಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಈ ಸಂಬಂಧ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News