Illegal liquor: ಅಕ್ರಮ ಮದ್ಯ ಸಾಗಾಣಿಕೆ: 06 ಪ್ರಕರಣ ದಾಖಲು

Trafficking of illegal liquor: ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಕೆರೆ ದಂಡೆಯ ಹತ್ತಿರ ರಸ್ತೆಗಾವಲು ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಿಲಾಗಿದೆ.

Written by - Manjunath N | Last Updated : Apr 17, 2024, 03:26 PM IST
  • ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ವಾಹನ ಸವಾರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
  • ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿದ್ದು, ಪ್ರಕರಣ ದಾಖಲಿಸಲಾಗಿದೆ.
Illegal liquor: ಅಕ್ರಮ ಮದ್ಯ ಸಾಗಾಣಿಕೆ: 06 ಪ್ರಕರಣ ದಾಖಲು title=

Trafficking of illegal liquor: ಬಳ್ಳಾರಿ: ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಿರುವುದರಿಂದ ಜಿಲ್ಲೆಯಲ್ಲಿ ಅಕ್ರಮ ಮದ್ಯ ಹೊಂದುವಿಕೆ ಮತ್ತು ಸಾಗಾಣಿಕೆ ಸಂಬಂಧಿಸಿದಂತೆ ಜಪ್ತಿ ಮಾಡಿ ಮಂಗಳವಾರ 06 ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಮಂಜುನಾಥ ಅವರು ತಿಳಿಸಿದ್ದಾರೆ.

ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಕೆರೆ ದಂಡೆಯ ಹತ್ತಿರ ರಸ್ತೆಗಾವಲು ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಿಲಾಗಿದೆ.

ಕುರುಗೋಡು ಪಟ್ಟಣದಿಂದ ಬಾದನಹಟ್ಟಿ ಗ್ರಾಮದ ಕಡೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ 7.380 ಲೀ. (ಅಂದಾಜು ಮೌಲ್ಯ ರೂ.64516) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ವಾಹನ ಸವಾರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್’ಗೆ ಬಹಿರಂಗ ಸವಾಲ್

ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದಿಂದ ದೇವಿನಗರ ಕ್ಯಾಂಪ್‍ಗೆ ಹೋಗುವ ಮಾರ್ಗ ಮದ್ಯದಲ್ಲಿ ಬರುವ ಕೆ.ಇ.ಬಿ ಹತ್ತಿರ ರಸ್ತೆಗಾವಲು ವೇಳೆ ದ್ವಿಚಕ್ರ ವಾಹನದಲ್ಲಿ 17.100 ಲೀ. (ಅಂದಾಜು ಮೌಲ್ಯ ರೂ.78,589) ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

ಬಳ್ಳಾರಿ ನಗರದ ಗುಗ್ಗರಹಟ್ಟಿಯಿಂದ ಹೊನ್ನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ತ್ರಿಚಕ್ರ ವಾಹನದಲ್ಲಿ 12.960 ಲೀ. (ಅಂದಾಜು ಮೌಲ್ಯ ರೂ.85,760) ಮದ್ಯ ಹಾಗೂ ವಾಹನ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಯಲ್ಲಿನ ಕಲ್ಲು ಕುಟಿಗಿನಹಾಳು(ಕೆ.ಕೆ ಹಾಳು) ಕ್ರಾಸ್ ಹತ್ತಿರ ರಸ್ತೆಗಾವಲು ಮಾಡುತ್ತಿರುವಾಗ ವೇಳೆ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯ ಮತ್ತು ವಾಹನವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಧಾರವಾಡ ಡಿಸಿ ಕಚೇರಿಗೆ ಬಂದ ವಿನೋದ್ ಅಸೂಟಿ

ಬಳ್ಳಾರಿ ತಾಲ್ಲೂಕಿನ ಜಾನೇಕುಂಟೆ ತಾಂಡಾದಲ್ಲಿನ ಕಿರಾಣಿ ಅಂಗಡಿಯ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ 9.000 ಲೀ. ಮದ್ಯ ಮತ್ತು 6.500 ಲೀ. ಬಿಯರ್ (ಅಂದಾಜು ಮೌಲ್ಯ ರೂ.7,360) ಹೊಂದಿದ್ದಕ್ಕಾಗಿ ವಶಕ್ಕೆ ಪಡೆದುಕೊಂಡು ಮದ್ಯ ಮತ್ತು ಬಿಯರ್ ಜಪ್ತು ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News