ಅಕ್ರಮ ಆಸ್ತಿ ಗಳಿಕೆ ಸಾಬೀತು: ಎಸ್ಪಿಗೆ 4 ವರ್ಷ ಸಾದಾ ಶಿಕ್ಷೆ, 1 ಕೋಟಿ ರೂ.ದಂಡ..!
ಎಸ್ಪಿಯಾಗಿ ಕಾರ್ಯನಿರ್ವಹಿಸುವಾಗ ಅಕ್ರಮ ಆಸ್ತಿ ಗಳಿಕೆ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಐಯ್ಯರ್ ಗೆ ಒಂದು ಕೋಟಿ ರೂಪಾಯಿ ದಂಡ ನಾಲ್ಕು ವರ್ಷ ಜೈಲು ಶಿಕ್ಷೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರು: ಎಸ್ಪಿಯಾಗಿ ಕಾರ್ಯನಿರ್ವಹಿಸುವಾಗ ಅಕ್ರಮ ಆಸ್ತಿ ಗಳಿಕೆ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಐಯ್ಯರ್ ಗೆ ಒಂದು ಕೋಟಿ ರೂಪಾಯಿ ದಂಡ ನಾಲ್ಕು ವರ್ಷ ಜೈಲು ಶಿಕ್ಷೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯ ಎಸ್ಪಿಯಾಗಿ ಶ್ರೀನಿವಾಸ್ 2007 ರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.ತಮ್ಮ ಆದಾಯ ಮೂಲಗಳಿಗಿಂತ ಶೇ.53 ರಷ್ಟು ಹೆಚ್ಚು ಆಸ್ತಿ ಸಂಪಾದನೆ ಮಾಡಿರುವುದು ದಾಳಿ ವೇಳೆ ಕಂಡುಬಂದಿತ್ತು.Naresh Babu : 'ನಾನು ಡೈವೋರ್ಸ್ ಕೊಡುತ್ತಿರುವುದನ್ನ ಪವಿತ್ರ ಲೋಕೇಶ್ ಗೆ ಕನೆಕ್ಟ್ ಮಾಡಬೇಡಿ'
ಈ ಸಂಬಂಧ ಅಂದಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರಕರಣ ದಾಖಸಿಕೊಂಡು ತನಿಖೆ ನಡೆಸಿ ಪೊಲೀಸರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ಪೂರ್ಣಗೊಳಿಸಿದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ವಿ.ಶ್ರೀಕಾಂತ್, ಆರೋಪಿತ ಎಸ್ಪಿಗೆ ನಾಲ್ಕು ವರ್ಷ ಸಾದಾ ಶಿಕ್ಷೆ ಹಾಗೂ 1 ಕೋಟಿ ರೂ.ದಂಡ ವಿಧಿಸಿದ್ದಾರೆ.ದಂಡ ಪಾವತಿಸುವಲ್ಲಿ ವಿಫಲರಾದರೆ ಹೆಚ್ಚುವರಿಯಾಗಿ 2 ವರ್ಷ ಸಾದಾ ಶಿಕ್ಷೆ ಅನುಭವಿಸಬೇಕೆಂದು ತೀರ್ಪು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.