ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರೋಷನ್ ಬೇಗ್ ಮತ್ತು ಜಮೀರ್ ಅಹಮ್ಮದ್​​ಗೆ ವಿಶೇಷ ತನಿಖಾ ದಳ(ಎಸ್ಐಟಿ) ನೋಟಿಸ್ ಜಾರಿ ಮಾಡಿದೆ.


COMMERCIAL BREAK
SCROLL TO CONTINUE READING

ಐಎಂಎ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಜೊತೆ ಈ ಇಬ್ಬರೂ 'ವ್ಯವಹಾರ' ನಡೆಸಿರುವುದು ತನಿಖೆಯಿಂದ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಜುಲೈ 29ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕ ರೋಷನ್ ಬೇಗ್, ಜಮೀರ್ ಅಹಮ್ಮದ್​​ಗೆ ತನಿಖಾಧಿಕಾರಿಗಳು ಸೂಚಿಸಿದ್ದಾರೆ.


ಐಎಂಎ ಮಾಲೀಕ ಮನ್ಸೂರ್ ಖಾನ್ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ವಿಡಿಯೋದಲ್ಲಿ ರೋಷನ್ ಬೇಗ್ ತನ್ನಿಂದ 400 ಕೋಟಿ ರೂ. ಪಡೆದುಕೊಂಡಿದ್ದಾರೆ. ಜಮೀರ್ ಅಹ್ಮದ್ ಅವರು ನನ್ನ ಜೊತೆಗೆ ವ್ಯಾಪರ ವಹಿವಾಟು ಮಾಡುತ್ತಿದ್ದರು ಎಂದು ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರೂ ಶಾಸಕರಿಗೆ ಎಸ್ಐಟಿ ನೋಟಿಸ್ ನೀಡಿದೆ.


ಏತನ್ಮಧ್ಯೆ, ಆದಾಯ ಇಲಾಖೆ ಮತ್ತು ಕಂಪನಿಗಳ ರಿಜಿಸ್ಟ್ರಾರ್ ಗೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಅಕೌಟೆಂಟ್​​ ಇಕ್ಬಾಲ್ ಖಾನ್ ಎಂಬುವರನ್ನು ಎಸ್​​ಐಟಿ ಬಂಧಿಸಿದೆ.