ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿನ ಒಳನಾಡಿನಲ್ಲಿ ಭಾರೀ ಮಳೆ(Heavy Rain)ಯಾಗುತ್ತಿದೆ. ಇದು ಇಂದು ನಾಳೆ, ನಾಡಿದ್ದು ಅಂದ್ರೆ ಮೂರು ದಿನವೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. 


ಇದನ್ನೂ ಓದಿ : ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ ನೀಡಬೇಡಿ-ಬಿಎಸ್ವೈ


ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಾದ ಉಡುಪಿ(Udupi), ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆ ಆಗುತ್ತಿದೆ.


ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರ್ಗಿ, ಯಾದಗಿರಿ, ಹಾವೇರಿ, ಬೀದರ್, ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು, ಈ ಕಾರಣದಿಂದ ಇಂದು-ನಾಳೆ 'ಯೆಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. 


ಇದನ್ನೂ ಓದಿ : ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ-ಸದಾನಂದ ಗೌಡ


ಕರಾವಳಿ ಜಿಲ್ಲೆಗಳಲ್ಲಿ ಇಂದು ನಾಳೆ ಭಾರೀ ಮಳೆ ಕಾರಣದಿಂದ 'ಆರೆಂಜ್​ ಅಲರ್ಟ್'​​(Orange Alert) ಘೋಷಣೆ ಮಾಡಲಾಗಿದೆ. ಅಲ್ಲದೆ ಮಲೆನಾಡು ಭಾಗದಲ್ಲಿ ಕೂಡ ಮಳೆ ಅಬ್ಬರ ಕಾರಣದಿಂದ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.


ಜುಲೈ 23 ರವರೆಗೆ ಉತ್ತರ ಕರ್ನಾಟಕದ(North Karnataka) ಭಾಗದ ಎಲ್ಲ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ