ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

Rain Alert: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ಜುಲೈ 5 ಬುಧವಾರ ರಜೆ ಘೋಷಿಸಿವೆ.

Written by - Bhavishya Shetty | Last Updated : Jul 5, 2023, 07:30 AM IST
    • ದ.ಕ ಮತ್ತು ಉಡುಪಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
    • ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ಜುಲೈ 5 ಬುಧವಾರ ರಜೆ ಘೋಷಿಸಿವೆ.
    • ಮಳೆಯಿಂದ ಉಂಟಾಗಬಹುದಾದ ಅಪಾಯಗಳ ವಿರುದ್ಧ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ
ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ title=
Karnataka Rain

Rain Alert in Karnataka: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ಜುಲೈ 5 ಬುಧವಾರ ರಜೆ ಘೋಷಿಸಿವೆ.

ಇದನ್ನೂ ಓದಿ: ಕರೆಂಟ್ ಶಾಕ್‌ನಿಂದ ಮರಿ ಮಂಗ ಸಾವು; ಮುಗಿಲು ಮುಟ್ಟಿದ ತಾಯಿ ಮಂಗನ ರೋಧನೆ!

ದ.ಕ ಮತ್ತು ಉಡುಪಿಯ ಆಯಾ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಮತ್ತು ಕೂರ್ಮಾ ರಾವ್ ಅವರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮನ್ವಯದಲ್ಲಿ ಜುಲೈ 4 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಇದೀಗ ಇಂದೂ ಸಹ ರಜೆ ಘೋಷಿಸಿದ್ದಾರೆ.

ಜತೆಗೆ ನಿರಂತರ ಮಳೆಯಿಂದ ಉಂಟಾಗಬಹುದಾದ ಅಪಾಯಗಳ ವಿರುದ್ಧ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ನೀರು, ಕೊಳಗಳು, ನದಿ ದಡಗಳು ಮತ್ತು ಕಡಲತೀರಗಳಿಂದ ತುಂಬಿರುವ ತಗ್ಗು ಪ್ರದೇಶಗಳಿಗೆ ತಮ್ಮ ಮಕ್ಕಳು ಹೋಗದಂತೆ ಎಚ್ಚರ ವಹಿಸಲು ಜಿಲ್ಲಾಡಳಿತ ಪೋಷಕರಿಗೆ ಸೂಚನೆ ನೀಡಿದೆ.

“ಜಿಲ್ಲಾಡಳಿತದಿಂದ ನಾಮನಿರ್ದೇಶನಗೊಂಡ ನೋಡಲ್ ಅಧಿಕಾರಿಗಳು 24x7 ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು. ಡಿಸಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕದಲ್ಲಿರಬೇಕು. ಪ್ರತಿ ತಾಲ್ಲೂಕಿನಲ್ಲಿ ಕುಂದುಕೊರತೆ ಕೇಂದ್ರಗಳನ್ನು ತೆರೆದು ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕ” ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರಜೆ ಘೋಷನೆ ಕುರಿತು ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ತಹಶೀಲ್ದಾರ್ ಮತ್ತು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ಉಡುಪಿ ಜಿಲ್ಲಾಧಿಕಾರಿ ವಹಿಸಿದ್ದರು. ಆದರೆ, ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಸ್ಥಿತಿಯಿಂದಾಗಿ, ಕೂರ್ಮಾ ರಾವ್ ಅವರು ಜೂನ್ 5 ರಂದು ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ವಿವಿಧ ಭಾಗಗಳಿಗೆ ಕೆಂಪು, ಕಿತ್ತಳೆ ಮತ್ತು ಹಳದಿ ಅಲರ್ಟ್ ಗಳನ್ನು ಘೋಷಣೆ ನೀಡಿದ್ದು, ಮುಂದಿನ 24 ಗಂಟೆಗಳಲ್ಲಿ ಹೆಚ್ಚು ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಈ ರಾಶಿಯವರ ಅದೃಷ್ಟ ಬೆಳಗುವನು ಶನಿದೇವ: ಎಂಥಾ ಕಷ್ಟದಲ್ಲೂ ಕೈಬಿಡಲ್ಲ-ಸಂಪತ್ತಿಗೆ ಕೊರತೆಯಾಗದಂತೆ ಕಾಯುವನು!

  • ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ
  • ಆರೆಂಜ್ ಅಲರ್ಟ್: ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆ
  • ಯೆಲ್ಲೋ ಅಲರ್ಟ್: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ತುಮಕೂರು ಜಿಲ್ಲೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News